1:33 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ: ದ್ವಿತೀಯ ವರ್ಷದ ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ

15/10/2023, 18:48

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ,ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಭಾನುವಾರ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 21ರ ಶನಿವಾರದಂದು ನಡೆಯಲಿರುವ ದ್ವಿತೀಯ ವರ್ಷದ ಪಿಲಿಪರ್ಬ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಮನಪಾ ಸದಸ್ಯರುಗಳಾದ ಶಕೀಲಾ ಕಾವ, ಜಯಲಕ್ಷ್ಮಿ, ಭರತ್ ಸೂಟರ್ ಪೇಟೆ, ನರೇಶ್ ಶೆಣೈ , ಉದಯ ಪೂಜಾರಿ, ಅಶ್ವಿತ್ ಕೊಟ್ಟಾರಿ, ಲಲಿತ್ ರಾಜ್ ಮೆಂಡನ್, ಕಮಲಾಕ್ಷ ಬಜಿಲ್ಕೇರಿ, ಮೋಹನ್ ಪೂಜಾರಿ, ಜಗದೀಶ್ ಕದ್ರಿ, ಚೇತನ್ ಕಾಮತ್, ಸೂರಜ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು