6:02 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಟಾಪನೆ; ನವರಾತ್ರಿ ಮಹೋತ್ಸವಕ್ಕೆ ಚಾಲನೆ

15/10/2023, 22:46

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವಕ್ಕೆ ಶ್ರೀಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯನ್ನು ಪ್ರತಿಷ್ಠಾಪನೆಗೊಳಿಸುವ ಮೂಲಕ ಭಾನುವಾರ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. 9 ದಿನಗಳ ಕಾಲ ಶ್ರೀಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ನಡೆಯಲಿದೆ.


ಮಂಗಳೂರು ದಸರಾ ಕ್ಷೇತ್ರದ ರೂವಾರಿ ಬಿ. ಜನಾರ್ಧನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನವದುರ್ಗೆಯ ಮೂರ್ತಿಗಳ ಪ್ರತಿಷ್ಢಾಪನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪೂಜಾರಿ ಅವರು, ಸ್ವರ್ಗ ಲೋಕದಿಂದ ದೇವಿಯೇ ಭೂಮಿಗಿಳಿದು ಕುದ್ರೋಳಿ ದೇಗುಲದ ಹಾಲ್ ನಲ್ಲಿ ಬಂದು ಕುಳಿತಿದ್ದಾಳೆ. ಇದು ಮನುಷ್ಯರಿಂದ ಮಾಡಲು ಸಾಧ್ಯವಿಲ್ಲ. ಇಷ್ಟು ಜನರನ್ನು ಸೇರಿಸಲು ಮನುಷ್ಯರಿಂದ ಸಾಧ್ಯವಿಲ್ಲ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ದೇವಳ ಆಡಳಿತ ಮಂಡಳಿಯ ಅಧ್ಯಕ್ಷ ಸಾಯಿರಾಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಹರಿಕೃಷ್ಣ ಬಂಟ್ವಾಳ್, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

ನವರಾತ್ರಿ ಮಹೋತ್ಸವ ಹಾಗೂ ದಸರಾ ಮಹೋತ್ಸವವು ಅ.25 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅ. 24ರಂದು 4 ಗಂಟೆಗೆ ಮಂಗಳೂರು ದಸರಾ ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜ ರಸ್ತೆಯಲ್ಲಿ ಸಾಗಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ. ಅ.15 ರಿಂದ ಅ. 23ರವರಿಗೆ ಪ್ರತಿದಿನ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.
ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಸ್ತಬ್ದಚಿತ್ರಗಳು ಭಾಗವಹಿಸಲಿದ್ದು, ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು