11:29 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸಿಎಂ ಬೆಂಗಾವಲು ಕಾರಿಗೆ ಡಿಕ್ಕಿಯಾದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು

29/07/2021, 19:18

ಹುಬ್ಬಳ್ಳಿ (ReporterKarnataka.com)

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿಯಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಯವರು ತಲುಪಿದಾಗ ಶಿವರಾಮ್ ಹೆಬ್ಬಾರ್ ಜತೆಗೆ ಇದ್ದರು. ವಿಮಾನ ನಿಲ್ದಾಣದಿಂದ ಹೊರ ತೆರಳುವಾಗ ಸಿಎಂ ಅವರಿದ್ದ ಕಾರನ್ನು ಹಿಂಬಾಲಿಸುವ ಭರದಲ್ಲಿ ಬೆಂಗಾವಲು ಪಡೆಗೆ ಕಾರು ಡಿಕ್ಕಿಯಾಗಿದೆ.

ಘಟನೆ ನಡೆಯುವಾಗ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು. ಅಪಘಾತದ ಸಂದರ್ಭದಲ್ಲಿ ಮಾಜಿ ಸಚಿವರ ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಯಾರಿಗೂ ಗಂಭೀರ ಸ್ವರೂಪದ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು