5:36 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ: ಮತ್ತೊಮ್ಮೆ ಅವಕಾಶ

17/10/2023, 19:07

ಬೆಂಗಳೂರು(reporterkarnataka.com): ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಮತ್ತೊಮ್ಮೆ ಪಡಿತರ ಚೀಟಿದಾರರಿಗೆ ಹೆಸರು ಸೇರ್ಪಡೆ/ತಿದ್ದುಪಡಿಗೆ ಅಕ್ಟೋಬರ್ 16ರಿಂದ 21 ರವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಿಗೆ ಅ.16ರಿಂದ 18ರ ವರೆಗೆ ಅವಕಾಶ ನೀಡಲಾಗಿದೆ.
ಅ. 19 ರಿಂದ 21 ರವರೆಗೆ ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು