5:35 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮೂಡುಬಿದಿರೆ ಪ್ರೆಸ್‌ಕ್ಲಬ್‌ನ ಮಾಜಿ ಅಧ್ಯಕ್ಷ ದಿ.ವೇಣುಗೋಪಾಲರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ

18/10/2023, 18:13

ಮಂಗಳೂರು(reporterkarnataka.com): ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್‌ಕ್ಲಬ್‌ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ‘ ಜನಪರ ಕಾಳಜಿಯ ಯುವ ಪತ್ರಕರ್ತ ವೇಣುಗೋಪಾಲ್ ಅವರು ಮೂಡುಬಿದಿರೆ ಪ್ರೆಸ್‌ ಕ್ಲಬ್ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಪ್ರೆಸ್‌ಕ್ಲಬ್‌ಗೆ ಸ್ವಂತ ನಿವೇಶನ ಒದಗಿಸಲು ಶ್ರಮವಹಿಸಿದ್ದರು ಎಂದರು.
ಜಯಕಿರಣ ಪತ್ರಿಕೆಯ ಮಾಲೀಕ ಪ್ರಕಾಶ್ ಪಾಂಡೇಶ್ವರ, ಸಂಪಾದಕ ದಿತೇಶ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. , ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಪ್ರೆಸ್‌ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಅರಿಫ್ ಪಡುಬಿದ್ರಿ, ಮೂಡಬಿದಿರೆ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ರೇಮಂಡ್ ತಾಕೊಡೆ, ಅಧ್ಯಕ್ಷ ಯಶೋಧರ ವಿ. ಬಂಗೇರ, ಕಾರ್ಯದರ್ಶಿ ಪ್ರೇಮಾಶ್ರೀ ಕಲ್ಲಬೆಟ್ಟು , ಸದಸ್ಯ ಪುನೀತ್ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ನುಡಿನಮನ ಸಲ್ಲಿಸಿದರು. ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು