7:27 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಮಳೆ ಇಲ್ಲದೆ, ಕರೆಂಟ್ ಇಲ್ಲದೆ ರೈತರು ಉದ್ಯೋಗ ಅರಸಿ ಗುಳೆ ಹೊರಟ್ಟಿದ್ದಾರೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಕ್ರೋಶ

18/10/2023, 23:39

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಇದರ ಪರಿಣಾಮ ಕಷ್ಟ ಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ.
ಹೀಗಾಗಿ ಕಾಗವಾಡ ಕ್ಷೇತ್ರದ ರೈತರು ಆತ್ಮಹತ್ಯೆ ಮಾಡಿಕೊಂಡರು ಕೂಡ ಆಶ್ಚರ್ಯ ಪಡಬೇಕಿಲ್ಲ ಎಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.
ಅವರು ಅಥಣಿ ಶುಗರ್ಸ ಆವರಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕಾಗವಾಡ ಕ್ಷೇತ್ರದ ರೈತರು ಸರಕಾರದ ನಡೆಗೆ ಬೇಸತ್ತು ಉದ್ಯೋಗ ಅರಸಿ ಗುಳೆ ಹೊರಟಿದ್ದು, ಈ ಸಂಕಷ್ಟ ಸ್ಥಿತಿಯಿಂದ ಹೊರ ಬರಲು ಕನಿಷ್ಠ 7 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಅವರು ಆಗ್ರಹಿಸಿದರು.ಬರಗಾಲದ ಈ ಸ್ಥಿತಿಗೆ ಬೇಸತ್ತು ಕಾಗವಾಡ ಮತಕ್ಷೇತ್ರದ ಸಂಬರಗಿ ಗ್ರಾಮದ ರೈತನೋರ್ವ ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಇದೇ ರೀತಿ ಮುಂದುವರೆದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದು ನಿಶ್ಚಿತ.
ಕಾಗವಾಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನ ಅಧಿಕಾರವಧಿತಲ್ಲಿ ಅನುಷ್ಠಾನಗೊಂಡ ಕೇಂದ್ರದ ಜಲಜೀವನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ನೂರಾರು ಜನಪರ ಮತ್ತು ಅಭಿವೃದ್ಧಿ ಪರ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸ್ಥಗಿತಗೊಂಡ ಪರಿಣಾಮ ಕಾಗವಾಡ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ಸರಕಾರದ ಅವಧಿಯಲ್ಲಿ ಅಂತಿಮ ಹಂತ ತಲುಪಿದ್ದ ಖಿಳೇಗಾಂವ ಬಸವೇಶ್ವರ ಯೋಜನೆಯ ಕಾರ್ಯ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇದರಿಂದ ಕಾಗವಾಡ ಕ್ಷೇತ್ರದ 70 ಸಾವಿರ ಎಕರೆ ಭೂಮಿ ನೀರಾವರಿ ಯಿಂದ ವಂಚಿತಗೊಂಡಿದೆ ಎಂದರು.
ಬಿಜೆಪಿ ಮುಖಂಡರಾದ ಮಹಾದೇವ ಕೋರೆ, ತಮ್ಮಣ್ಣ ಪಾರಶೆಟ್ಟಿ, ಈಶ್ವರ ಕುಂಬಾರೆ, ಅಪ್ಪಣ್ಣಾ ಮಗದುಮ್, ರಾಕೇಶ ಪಾಟೀಲ, ರಾಜು ಚವ್ಹಾಣ, ಶಿವಾನಂದ ಮೆಣಸಿ, ವಿಠ್ಠಲ ಮಾಳಿ, ಉತ್ಕರ್ಷ ಪಾಟೀಲ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು