5:37 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಇಂದ್ರಾಳಿ ರೈಲ್ವೆ ಮೇಲು ಸೇತುವೆ ರಸ್ತೆ ಆಭಿವೃಧ್ದಿ ಕಾಮಗಾರಿ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

19/10/2023, 12:37

ಉಡುಪಿ (reporterkarnataka.com): ಪ್ರತಿಯೊಬ್ಬ ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುಧಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ೩೦ ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾಷ್ಟಿçÃಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂದಿಸಿದ ಅಧಿಕಾರಿಗಳು ತತ್‌ಕ್ಷಣದಲ್ಲಿಯೇ ಸುರಕ್ಷಿತಾ ಸೌಕರ್ಯಗಳ ಕಾರ್ಯಗಳನ್ನು ವೈಜ್ಞಾನಿಕವಾಗಿ ಕೈಗೊಂಡು ಅಪಘಾತಗಳನ್ನು ತಪ್ಪಿಸಲು ಮುಂದಾಗಬೇಕು ಎಂದರು.
ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಇಂದ್ರಾಳಿಯ ರೈಲ್ವೆ ಮೇಲ್ಸೇತುವೆಯ ಎರಡೂ ಭಾಗದ ೧೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ಬಸ್‌ಗಳು ನಿಲ್ಲಿಸದಂತೆ ಕ್ರಮ ವಹಿಸಬೇಕು. ಬಸ್‌ಗಳ ನಿಲುಗಡೆಯಿಂದ ವಾಹನ ಸುಗಮ ಸಂಚಾರಕ್ಕೆ ತೊಂದರೆಯಾಗುವುದರ ಜೊತೆಗೆ ರಸ್ತೆ ಅಪಘಾತಗಳು ಆಗುವ ಸಾಧ್ಯತೆಗಳಿವೆ ಎಂದರು.

ರಸ್ತೆಯ ಬದಿಯ ಖಾಲಿ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲು ಮಾರ್ಗಸೂಚಿಗಳನ್ನು ರಚಿಸಿ, ಗಿಡ ಮರಗಳನ್ನು ನೆಡಬೇಕು ಎಂದ ಅವರು, ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರ ಹಾಗೂ ಮರದ ರೆಂಬೆಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಪೌರಾಯುಕ್ತ ರಾಯಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಕ ಇಂಜಿನಿಯರ್ ದಿನೇಶ್ ಕೆ.ಎನ್, ರಾಷ್ಟ್ರೀಯ ಹೆದ್ದಾರಿ ಅಭಿಯಂತರ ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು