2:25 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್: ದೆಹಲಿಗೆ ಬರುವಂತೆ ನಡ್ಡಾ ಸೂಚನೆ?

21/10/2023, 14:21

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಅಕ್ಟೋಬರ್ 25ರಂದು ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ, ಪ್ರತಿಪಕ್ಷದ ನಾಯಕನ ಹುದ್ದೆ ಹಾಗೂ ಜೆಡಿಎಸ್ ಜತೆ ಮೈತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಆಗಿರುವ ಸದಾನಂದ ಗೌಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಂತ ಸದಾನಂದ ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆ ತೀರಾ ಕಡಿಮೆ. ಆದರೆ ಲೋಕಸಭೆ ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗಬಾರದು ಎನ್ನುವ ದೃಷ್ಟಿಯಿಂದ ಸದಾನಂದ ಗೌಡ ಅವರನ್ನು ದೆಹಲಿಗೆ ಕರೆಸಿರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಕೆಲ ದಿನಗಳ ಹಿಂದೆ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಸದಾನಂದ ಗೌಡರು ಅಸಮಾಧಾನ ಹೊರ ಹಾಕಿದ್ದರು. ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು. ಈ ನಡುವೆ ಡಿವಿಎಸ್ ಕಾಂಗ್ರೆಸ್ ಸೇರುತ್ತಾರೆ ಅನ್ನೋ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಶುರುವಾಗಿವೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾದಿಯನ್ನು ಸದಾನಂದ ಗೌಡರು ತುಳಿದರೆ ಪಕ್ಷದ ಇಮೇಜಿಗೆ ದಕ್ಕೆ ಬರಬಹುದು.
ಈ ಎಲ್ಲ ಬೆಳವಣಿಗೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ಮಾತುಕತೆಗೆ ಕರೆದಿದೆ ಎನ್ನಲಾಗಿದೆ.
ಕರಾವಳಿ ಜಿಲ್ಲೆಯ ಸುಳ್ಯ ಸಮೀಪದ ದೇವರಗುಂಡದ ಸದಾನಂದ ಗೌಡ ಅವರು ಬಿಜೆಪಿ ಪಕ್ಷದ ದೊಡ್ಡ ಫಲಾನುಭವಿ ನಾಯಕ. ಶಾಸಕ, ಸಂಸದ, ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ ಸೇರಿದಂತೆ ಎಲ್ಲ ಸ್ಥಾನಮಾನಗಳನ್ನು ಪಕ್ಷ ಅವರಿಗೆ ನೀಡಿದೆ. ಇದನ್ನು ಸ್ವತಃ ಸದಾನಂದ ಗೌಡ ಅವರೇ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು