8:16 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ

ಇತ್ತೀಚಿನ ಸುದ್ದಿ

ಉಡುಪಿ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ ಸಂಪನ್ನ

21/10/2023, 22:15

ಉಡುಪಿ(reporterkarnataka.com): ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್
ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯು ಉದ್ಘಾಟನೆಗೊಂಡು, ಕವಿಗೋಷ್ಠಿಯೊಂದಿಗೆ ಸಂಪನ್ನಗೊಂಡಿತು.

ಕಾಲೇಜಿನ ಪ್ರಾಚಾರ್ಯೆ ಆಶಾಕುಮಾರಿ ಉದ್ಘಾಟಿಸಿ ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ ಮೂಡುತ್ತದೆ ಎಂದು ತಿಳಿಸಿದರು.
ಕ.ಸಾ.ಪ ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ ಮನೋಹರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾಧ್ಯಕ್ಷತೆ ವಹಿಸಿದ್ದ ಉಡುಪಿ ತಾಲ್ಲೂಕಿನ ಕ.ಸಾ.ಪ ಅಧ್ಯಕ್ಷ ಹಾಗೂ ಕಾಲೇಜು ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರವಿರಾಜ್ ಹೆಚ್.ಪಿ ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕಥೆ, ಕವನಗಳನ್ನು ರಚಿಸಲು ಒಲವು ತೋರಿದ್ದಲ್ಲಿ ಮುಂದೆ ಸಾಮಾಜಿಕ ವೇದಿಕೆಯಲ್ಲಿ ಉತ್ತಮ ಕವಿ ಮತ್ತು ಲೇಖಕರಾಗಿ ಮೂಡಿಬರಲು ಸಾಧ್ಯ ಎಂದು ತಿಳಿಸಿದರು.
ಕವಯಿತ್ರಿ ಪೂರ್ಣಿಮಾ ಸುರೇಶ್ ಕವಿಗೋಷ್ಠಿಯ ಆಶಯ ಭಾಷಣದಲ್ಲಿ ಕವಿತೆಯ ಮೂಲಕ ಭಾವನೆಗಳನ್ನು ಪ್ರಕಟ ಮಾಡುವವರು ಕವಿಗಳು, ಬಾಲ್ಯದಿಂದ ಮುಪ್ಪಿನವರೆಗೆ ಅನುಭವಿಸುವ ಅನುಭವಗಳನ್ನು ಕಾವ್ಯದಲ್ಲಿ ಬಿತ್ತರಿಸುತ್ತದೆ. ಒಳನೋಟ ಕಾಣಲು ನಮ್ಮಲ್ಲಿ ಭಾವನೆಗಳು ಬೇಕು ಎಂದು ನುಡಿದರು.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಿ ಹಾಗೂ ರಂಗನಟ ರಾಜೇಶ್ ಭಟ್ ಪಣಿಯಾಡಿ ವಹಿಸಿಕೊಂಡು ಯುಪಿಎಂಸಿ ಕೇವಲ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಶಿಕ್ಷಣ ನೀಡುತ್ತಿದ್ದರೂ ಇಲ್ಲಿನ ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿಯನ್ನು ಶ್ಲಾಘಸಿ, ಕವಿತೆ ಹುಟ್ಟಲು ಜಾಗ, ಪ್ರಕೃತಿ, ಏಕಾಂತ, ನೋವು, ರೋಷ, ಭಾವಾ ಬೇಕಾಗುತ್ತದೆ, ಭಾವನೆಗಳನ್ನು ಬಿತ್ತರಿಸಲು ಕವಿತೆ ಸಾಧನಾ ಎಂದು ತಿಳಿಸಿದರು. ಸಾಹಿತಿ ನಾರಾಯಣ ಮಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರೇಮಸಾಯಿ, ಕಾವ್ಯ ಶೆಟ್ಟಿ, ರಕ್ಷಿತಾ, ಆಶಿಕಾ, ಸ್ನೇಹಾ, ಸಿಂಚನಾ, ಅದೀಶಾ, ಕೃತಿಕಾ, ನಂದೀಶ್ ಕವನಗಳನ್ನು ರಚಿಸಿ ವಾಚಿಸಿದರು.
ಕನ್ನಡ ಉಪನ್ಯಾಸಕ ಶಶಿಕಾಂತ್ ಶೆಟ್ಟಿ ಸ್ವಾಗತಿಸಿದರು, ಕವಿಗೋಷ್ಠಿಯ ಸಂಚಾಲಕ ರಾಘವೇಂದ್ರ ಜಿ.ಜಿ ವಂದಿಸಿದರು.
ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ ಸಭಾ ಕಾರ್ಯಕ್ರಮವನ್ನು ಹಾಗೂ ಕ.ಸಾ.ಪ ಉಡುಪಿ ತಾಲ್ಲೂಕಿನ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಕವಿಗೋಷ್ಠಿಯನ್ನು ನಿರೂಪಿಸಿ, ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು