9:08 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ನಾಗನೂರ: ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ದಸರಾ ಸಂಭ್ರಮ: ಜನರ ರಂಜಿಸಿದ ನಟ ಶರಣ್

22/10/2023, 19:20

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ಮಹೋತ್ಸವ ಅ. 15ರಿಂದ ಅ. 23ರ ವರೆಗೆ ನಡೆಯಲಿದೆ.
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ದಸರಾ ಮಹೋತ್ಸವ ಸಂಪನ್ನಗೊಳ್ಳಲಿದೆ.


21ರಂದು ಸಂಜೆ ಜರುಗಿದ ದಸರಾ ಉತ್ಸವದಲ್ಲಿ ಕನ್ನಡದ‌ ಖ್ಯಾತ ನಟ ಶರಣ ಅವರು ಪಾಲ್ಗೊಂಡು ತಮ್ಮ‌ಹಾಸ್ಯ ನಟನೆ ಹಾಗೂ ಚಿತ್ರಗೀತೆಗಳನ್ನು ಹಾಡುವ ಮೂಲಕ ಜನಮನ ರಂಜಿಸಿದರು. ನಟಿ ರಜಿನಿ, ಸರಿಗಮಪ ವಾಹಿನಿಯ ಗಾಯಕಿ ದಿಯಾ ಹೆಗಡೆ, ಬೆಂಗಳೂರಿನ ಡಿಕೆಡಿ ಡಾನ್ಸ್ ಟೀಮ್ ನ‌ ಕಾರ್ಯಕ್ರಮಗಳು ಸೇರಿದಂತೆ ಇತರ ಸಾಂಸ್ಕೃತಿಕ ಹಾಗೂ ಹಾಸ್ಯ ಭರಿತ‌ ಕಾರ್ಯಕ್ರಮಗಳು ಜನಮನ ತಣಿಸಿದವು.
ಅಥಣಿ ಶಾಸಕ ಲಕ್ಷ್ಮಣ ಸಂಗಪ್ಪ ಸವದಿ, ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ, ವಿಧಾನ ಪರಿಷತ್ ಸದಸ್ಯರಾದ ಶ ಚನ್ನರಾಜ, ಹಟ್ಟಿಹೊಳಿಯವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು