1:25 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ವಂಚನೆ: ತನಿಖೆಗೆ ಆಡಿಷಲ್ ಸಿವಿಲ್ ನ್ಯಾಯಾಲಯ ಆದೇಶ

24/10/2023, 12:44

ಬ್ರಹ್ಮಾವರ(reporterkarnataka.com):ಅವಿಭಜಿತ ದ.ಕ. ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದೆ.
ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್ ಮುಖಂಡ ಕರಾವಳಿ ಮಲೆನಾಡು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತೀವ್ರವಾಗಿ ಖಂಡಿಸಿ ಮಾತಾನಾಡಿ ತನಿಖೆ ನಡೆಸಲು ಆಗ್ರಹಿಸಿದ್ದರು.
ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು