6:16 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸುಮಾರು 204 ಪ್ರಕರಣಗಳ ತನಿಖೆಗೆ ಸಹಕರಿಸಿದ ಪೊಲೀಸ್ ಡಾಗ್ ಗೆ ಬೀಳ್ಕೊಡುಗೆ: 10 ವರ್ಷಗಳ ಸುದೀರ್ಘ ಸೇವೆ ನೀಡಿದ ಶ್ವಾನ

25/10/2023, 10:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳ ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್‍ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಶ್ರಮಿಸಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು.‌ ಪೊಲೀಸ್ ಶ್ವಾನಕ್ಕೆ ನಗರದ ಡಿ.ಎ.ಆರ್. ಆವರಣದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆದಿದೆ. ಶ್ವಾನದ ಹ್ಯಾಂಡ್ಲಾರ್ ಗಳಾಗಿ ಮಂಜುನಾಥ ಹಾಗೂ ಸಹಾಯಕ ನಿರ್ವಾಹಕರಾದ ಕುಮಾರ್ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ. ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ 204 ಪ್ರಕರಣಗಳಲ್ಲಿ 35 ಪ್ರಕರಣದಲ್ಲಿ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ. ಈ ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿಯೂ ಹಲವು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿತ್ತು. ಶ್ವಾನದ ಹ್ಯಾಂಡ್ಲರ್ ಗಳಾದ ಮಂಜುನಾಥ್ ಹಾಗೂ ಕುಮಾರ್‍ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸಂಶನ ಪತ್ರ ನೀಡಿ ಗೌರವಿಸಿರುತ್ತಾರೆ. ಈ ಶ್ವಾನ 2013ರಲ್ಲಿ ಪೊಲೀಸ್ ಇಲಾಖೆ ಸೇರಿತ್ತು. ಅಲ್ಲಿಂದ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕರಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು