8:41 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ; ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ: ವಿಕಾಸ್ ಪುತ್ತೂರು

26/10/2023, 14:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಮುಂದಿನ ವರ್ಷ ಜೂನ್ ನಲ್ಲಿ ನಡೆಯಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಪ್ರಥಮ ಗುರಿಯಾಗಿದೆ ಎಂದು ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ವಿಕಾಸ್ ಪುತ್ತೂರು ಹೇಳಿದರು. ಅವರು ಕೊಟ್ಟಿಗೆಹಾರದಲ್ಲಿ ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಎರಡೂ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಜಯಭೇರಿ ಬಾರಿಸಲಿದ್ದು ಕಾಂಗ್ರೇಸ್ ಗೆ ಸರಿಯಾದ ಪಾಠ ಕಲಿಸಲಿದೆ. ಪ್ರತಿ ಹೋಬಳಿ ಮಟ್ಟದಲ್ಲಿ ಬೂತ್ ಸಂಘಟನೆ ಮಾಡಿ ಪಕ್ಷ ಗೆಲುವು ಸಾಧಿಸಲು ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಕಾರಣ ಕರ್ತರಾಗಬೇಕು. ಈಗಾಲೇ ಮತದಾರರ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕಾಂಗ್ರೆಸ್ಸಿನ ನಾಡ ವಿರೋಧಿ ಧೋರಣೆಗಳಿಗೆ ನಮ್ಮ ಕ್ಷೇತ್ರದ ಪ್ರತಿನಿಧಿಗಳು ಹೆಚ್ಚೆಚ್ಚು ವಿಜೇತರಾಗುವ ಅನಿವಾರ್ಯತೆ ಇದೆ. ಇದರಿಂದ ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಸಹಕರಿಸಬೇಕು. ಹಾಗೂ ಪಕ್ಷವನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಪಣ ತೊಡಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಸಂಜಯ್ ಗೌಡ, ಎ. ಆರ್. ಅಭಿಲಾಷ್, ಆದರ್ಶ್ ತರುವೆ, ಹರೀಶ್, ಎ.ಎಸ್.ಅಶ್ವತ್ಥ್, ಸಾಗರ್, ಪರೀಕ್ಷಿತ್ ಜಾವಳಿ, ವಿಕ್ರಂ ಗೌಡ, ಪ್ರವೀಣ್, ದೇವೇಂದ್ರ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು