ಇತ್ತೀಚಿನ ಸುದ್ದಿ
ಅರಣ್ಯ ಇಲಾಖೆಯಿಂದ ಮುಂದುವರಿದ ಹುಲಿ ಉಗುರು ಕಾರ್ಯಾಚರಣೆ: ಇಬ್ಬರು ಅರ್ಚಕರ ಬಂಧನ
26/10/2023, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಮುಂದುವರಿದ ಹುಲಿ ಉಗುರು ಕಾರ್ಯಚರಣೆಯಲ್ಲಿ ಇಬ್ಬರು ಅರ್ಚಕರನ್ನು ಪೊಲೀಸರು ಬಂಧಿಸಿದ್ದಾರೆ.
ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಎಂಬವರು ಬಂಧಿತರು. ಇವರು ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದರು. ಬಂಧಿತರಿಂದ ಮೂರು ಹುಲಿ ಉಗುರು ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನ ವಿಚಾರಣೆ ನಡೆಸುತ್ತಿದ್ದಾರೆ.
ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದರು.
ಈ ಇಬ್ಬರೂ ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.