7:17 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ: ವಿಶ್ವ ಬಂಟರ ಸಮ್ಮೇಳನದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

28/10/2023, 16:48

ಉಡುಪಿ(reporterkarnataka.com) : ಕಲೆ, ಕ್ರೀಡೆ, ಸಾಹಿತ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬಂಟರ ಸಮುದಾಯದ ಕೊಡುಗೆ ಅಪಾರ. ಸ್ವಾತಂತ್ರ್ಯ ಹೋರಾಟದಲ್ಲೂ ಸಮುದಾಯದ ಹಲವು ಮಂದಿ ಪಾಲ್ಗೊಂಡಿದ್ದರು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.


ನಗರದ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ’ದಲ್ಲಿ ಅವರು ಮಾತನಾಡಿದ ಸಚಿವರು,ಕರ್ನಾಟಕಕ್ಕೆ, ಇಡೀ ಸಮಾಜಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ, ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದರು.

ಹೊರ ರಾಜ್ಯ, ವಿದೇಶಗಳಲ್ಲಿ ಇರುವ ಬಂಟ ಸಮುದಾಯದವರನ್ನು ಒಗ್ಗೂಡಿಸುವ ಕೆಲಸವನ್ನು ಉಡುಪಿ-ಮಂಗಳೂರು ಬಂಟ ಸಮಾಜದವರು ಈ ಸಮ್ಮೇಳನದ ಮೂಲಕ ಮಾಡಿದ್ದಾರೆ ಎಂದು ಸಚಿವರಾದ ಹೆಬ್ಬಾಳ್ಕರ್ ಹೇಳಿದರು.
ನನ್ನ ತವರು ಬೆಳಗಾವಿಯಲ್ಲಿ ಬಂಟ ಸಮುದಾಯದವರ ಜೊತೆ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ಹೋಟೆಲ್ ಉದ್ಯಮಕ್ಕೆ ಬಂಟರ ಕೊಡುಗೆ ಅನನ್ಯ. ಬಂಟರ ಸಾಧನೆ ನೋಡಿದರೆ ಈ ಸಮುದಾಯದ ಮೇಲೆ ದೇವರ ಆಶೀರ್ವಾದವಿದೆ ಅಂತಾನೆ ಅರ್ಥ ಎಂದರು.
ಬಂಟ ಸಮುದಾಯ ಹೃದಯ ಶ್ರೀಮಂತಿಕೆಯ ಸಮಾಜ, ತಾವು ಬೇಳಿತಾರೆ, ಇತರ ಸಮಾಜದವರನ್ನು ಒಟ್ಟಿಗೆ ಕರೆದೊಯ್ಯುತ್ತಾರೆ. ವಿಶ್ವ ಬಂಟರ ಸಮ್ಮೇಳನ ಯಶಸ್ವಿಯಾಗಲಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾರಿಸಿದರು. ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಉಡುಪಿಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ವಿಧಾನಸಭೆಯ ಸಭಾಪತಿಗಳಾದ ಯು.ಟಿ.ಖಾದರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಶಾಸಕರಾದ ಗಣೇಶ್ ಹುಕ್ಕೇರಿ, ಯಶ್ಪಾಲ್ ಸುವರ್ಣ, ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ವಿಶೇಷ ಅತಿಥಿಗಳಾಗಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ
ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವು ಮುಖಂಡರು ಸೇರಿದಂತೆ ಬಂಟರ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು