7:23 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ಆದಿ ಕವಿ ಮಹರ್ಷಿ ವಾಲ್ಮೀಕಿ ತತ್ವ, ಸಂದೇಶ ಜಗತ್ತಿಗೆ ಆದರ್ಶ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಭಿಮತ

28/10/2023, 19:05

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com
ಅಥಣಿ ತಾಲೂಕಾಡಳಿತ, ತಾಲೂಕಾ ಪಂಚಾಯತ್, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸತ್ಯಪ್ರಮೋದ ನಗರದಲ್ಲಿನ ಮಹರ್ಷಿ ವಾಲ್ಮೀಕಿ ಭವನದಲ್ಲಿ ಶನಿವಾರ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.


ಅಧ್ಯಕ್ಷತೆ ವಹಿಸಿ ಮಾತನಾಡಿದ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ
ಲಕ್ಷ್ಮಣ ಸಂ. ಸವದಿ ಅವರು , ಮಹರ್ಷಿ ವಾಲ್ಮೀಕಿಯವರು ಪವಿತ್ರ ರಾಮಾಯಣ ರಚನೆ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ್ದಾರೆ. ವಾಲ್ಮೀಕಿಯವರ ತತ್ವಾದರ್ಶ ಸಾರ್ವಕಾಲಿಕ. ಮಹರ್ಷಿ ವಾಲ್ಮೀಕಿ, ಜಗಜ್ಯೋತಿ ಬಸವಣ್ಣನವರು, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇನ್ನಿತರ ಮಹಾತ್ಮರು, ದೇಶಭಕ್ತರು, ಸಂತರು, ಶರಣರು, ಒಂದೇ ಜಾತಿ, ಮತಕ್ಕೆ ಸೀಮಿತರಾದ ವ್ಯಕ್ತಿಗಳಲ್ಲ. ಇವರು ನಾಡಿನ ಜನಾಂಗಕ್ಕೆ ನೀಡಿದ ಕೊಡುಗೆ ಅನನ್ಯ. ಇಂತವರ ಜಯಂತಿ, ಕಾರ್ಯಕ್ರಮಗಳನ್ನು ಸರ್ವ ಧರ್ಮದ ಜನರು ಒಟ್ಟಾಗಿ ಅರ್ಥಪೂರ್ಣವಾಗಿ ಆಚರಿಸಬೇಕು. ಇವರ ತತ್ವ ಸಂದೇಶಗಳನ್ನು ಮುಂದಿನ ಜನಾಂಗದವರಿಗೂ ತಿಳಿಯಪಡಿಸುವ ಮೂಲಕ ಮಹಾತ್ಮರ ಹೆಸರು ಅಜರಾಮರವಾಗಿ ಉಳಿಯುಂತಾಗಬೇಕು ಎಂದು ಅಭಿಪ್ರಾಯಪಟ್ಟರು.
ಮಹರ್ಷಿ ವಾಲ್ಮೀಕಿ ಸಮಾಜದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಶಿಕ್ಷಣದ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಥಣಿ ತಹಸೀಲ್ದಾರ್ ವಾಣಿ ಯು., ತಾಪಂ ಇ.ಒ. ಶಿವಾನಂದ ಕಲ್ಲಾಪುರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಎಸ್. ಯಾದವಾಡ, ಪುರಸಭೆ ಮುಖ್ಯಾಧಿಕಾರಿಗಳಾದ ಅಶೋಕ ಗುಡಿಮನಿ, ಪಿಡಬ್ಲುಡಿ ಎಇಇಗಳಾದ ವೀರಣ್ಣ ವಾಲಿ, ಜಯಕುಮಾರ ಹಿರೇಮಠ, ಪಿಎಸ್ಐ ಎಸ್.ಎಮ್ . ಕಾಜೋಳ, ಪುರಸಭೆ ಸದಸ್ಯರಾದ ಸಂತೋಷ ಸಾವಡಕರ್, ರಾಜು ಗುಡೋಡಗಿ, ಬಸವರಾಜ ನಾಯಿಕ, ಬೀರಪ್ಪ ಯಕ್ಕಂಚಿ, ಜಿ.ಪಂ. ಮಾಜಿ ಸದಸ್ಯರಾದ ಶ್ರೀಶೈಲ ಗಸ್ತಿ, ಮುಖಂಡರಾದ ಸಿದರಾಯ ನಾಯಿಕ, ಸಾಹಿತಿಗಳಾದ ಡಾ. ವಿ.ಎಸ್. ಮಾಳಿ, ಲಕ್ಕಪ್ಪ ನಾಯಿಕ ಸೇರಿದಂತೆ ಇತರ ಗಣ್ಯಮಾನ್ಯರು, ವಾಲ್ಮೀಕಿ ಸಮಾಜ ಬಾಂಧವರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು