1:24 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊರಗಜ್ಜ ಚಿತ್ರೀಕರಣ: ನಟಿ ಶುಭಾ ಪೂಂಜ ಜತೆ ಯುವಕರ ಗುಂಪು ಅಸಭ್ಯ ವರ್ತನೆ; ಶೂಟಿಂಗ್ ರದ್ದು

29/10/2023, 08:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ಕೊರಗಜ್ಜದ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ
ನಟಿ ಶುಭಾ ಪೂಂಜಾ ಅವರೊಂದಿಗೆ ಕೆಲವು ಕಿಡಿಗೇಡಿಗಳು ಅಸಭ್ಯ ವರ್ತಿಸಿದ ಘಟನೆ ನಡೆದಿದೆ.

ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ನಟಿ ಶುಭಾ ಪೂಂಜಾ ಡ್ಯಾನ್ಸ್ ಮಾಡುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅವರ ಕೈ ಹಿಡಿದು ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕರ ಅಸಭ್ಯ ವರ್ತನೆಯಿಂದ ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ನಿಲ್ಲಿಸಿದೆ. ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಕೊರಗಜ್ಜ ಚಿತ್ರ ಚಿತ್ರೀಕರಣ ನಡೆಯುತ್ತಿತ್ತು.
ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಜೊತೆ ಶುಭಾ ಶೂಟಿಂಗ್ ನಡೆಸುವ ವೇಳೆ ನಡೆದ ಘಟನೆ ನಡೆದಿದೆ.
ಆದರೆ, ಚಿತ್ರತಂಡ ಪೊಲೀಸರಿಗೆ ದೂರು ನೀಡಿಲ್ಲ.
ಘಟನೆ ಬಗ್ಗೆ ನಿರ್ದೇಶಕ ಸುಧೀರ್ ಅತ್ತಾವರ ಮಾತನಾಡಿ, ಘಟನೆ ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ.
ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು. ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು. ಬಿಜೆಪಿ ಪಕ್ಷದ ಸಾಗರ ಘಟಕವೆಂದು ಹೇಳಿಕೊಂಡು ಕೆಲ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಸುಧೀರ್ ಅತ್ತಾವರ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು