ಇತ್ತೀಚಿನ ಸುದ್ದಿ
ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಯಲ್ಲಿ ನಿಗಾ ಇಡಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಪರಮೇಶ್ವರ್ ಸೂಚನೆ
29/10/2023, 17:19

ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಗಡಿಯಲ್ಲಿ ನಿಗಾ ಇಡಲು ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಮಂಗಳೂರು, ಕೊಡಗು ಮತ್ತು ಮೈಸೂರಿನಲ್ಲಿ ಬೆದರಿಕೆ ಬಂದಿತ್ತು. ಆ ಮೂರು ಕಡೆಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು ಎಂದು ಅವರು ನುಡಿದರು.
ರಾಜ್ಯ ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಕಾನ್ ಸ್ಟೇಬಲ್ ಹುದ್ದೆ ಖಾಲಿ ಇದೆ. ಕಳೆದ 4-5 ವರ್ಷಗಳಿಂದ ಹೊಸ ನೇಮಕಾತಿ ನಡೆದಿಲ್ಲ. ಸಬ್ ಇನ್ಸ್ ಪೆಕ್ಟರ್ ಹುದ್ದೆ ಕೂಡ ಖಾಲಿ ಇದೆ. ಆದರೆ ಪಿಎಸ್ ಐ ನೇಮಕಾತಿ ಹಗರಣ ನ್ಯಾಯಾಲಯದಲ್ಲಿದೆ. ಸರಕಾರದ ಅಭಿಪ್ರಾಯವನ್ನು ಕೋರ್ಟ್ ಗೆ ತಿಳಿಸಲಾಗಿದೆ. ಆದರೆ, ನ್ಯಾಯಾಲಯ ಏನು ತೀರ್ಪು ನೀಡುತ್ತದೆ ಎಂಬುದನ್ನು ಕಾಯುತ್ತಿದ್ದೇವೆ ಎಂದು ಅವರು ನುಡಿದರು.