7:38 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ನೆಮ್ಮದಿಯ ಬದುಕಿಗೆ ಊಟ ಸಿಗದಿದ್ದರೂ ಪರವಾಗಿಲ್ಲ, ನ್ಯಾಯ ಮಾತ್ರ ಸಿಗಲೇ ಬೇಕು: ಸ್ಪೀಕರ್ ಯು.ಟಿ. ಖಾದರ್

29/10/2023, 21:30

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಒಬ್ಬ ವ್ಯಕ್ತಿಗೆ ಊಟ ಇಲ್ಲದಿದ್ದರೂ ಪರವಾಗಿಲ್ಲ ಆದರೆ ಆತನಿಗೆ ನ್ಯಾಯ ಸಿಗುವುದು ಅತ್ಯಂತ ಅಗತ್ಯವಾಗಿರುತ್ತದೆ. ಆತನಿಗೆ ನ್ಯಾಯ ಸಿಕ್ಕಲ್ಲಿ ಆತ ನೆಮ್ಮದಿಯಿಂದ ಇರುತ್ತಾನೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಅವರು ಭಾನುವಾರ ಮಂಗಳೂರು ನಗರ ಪೊಲೀಸ್ ಘಟಕದ ಸಿಎಆರ್ ಕಚೇರಿ, ಬಜ್ಪೆ ಪೊಲೀಸ್ ಠಾಣೆ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ನ. 1ರಂದು ನಡೆಯಲಿರುವ ಡ್ರಗ್ಸ್ ಮುಕ್ತ ವಾಕಥನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಪೊಲೀಸ್ ಇಲಾಖೆ ಮಹತ್ವದ ಕಾರ್ಯ ಮಾಡುತ್ತಿದೆ. ಇದರಿಂದಾಗಿ ರಾತ್ರಿ ಹೊತ್ತಿನಲ್ಲಿ ಜನರು ನೆಮ್ಮದಿಯಿಂದ ಮಲುಗುತ್ತಿದ್ದಾರೆ. ಒಂದು ಠಾಣೆಯ ಇನ್‌ಸ್ಪೆಕ್ಟರ್, ಎಸ್‌ಐ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಆತನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬಹುದು ಎಂದು ಸ್ಪೀಕರ್ ಅಭಿಪ್ರಾಯಪಟ್ಟರು.
ಜನರಿಗೆ ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬಂದಾಗ ನಮ್ಮ ಸಮಾಜ ಸ್ವಸ್ಥ್ಯ ಸಮಾಜವಾಗಿ ನಿರ್ಮಾಣವಾಗುತ್ತದೆ.
ಶೇ.90ರಷ್ಟು ಜನ ಸರಿ ಇದ್ದು, ಶೇ.10ರಷ್ಟು ಜನ ಸರಿ ಇಲ್ಲದಿದ್ದರೆ ಎಲ್ಲರೂ ಸರಿ ಇಲ್ಲ ಎಂದು ಹೇಳುತ್ತಾರೆ. ಆದುದರಿಂದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಒಟ್ಟಿಗೆ ಸೇರಿ ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡಬೇಕು. ಗೂಂಡಾ ಶಕ್ತಿಯನ್ನು ಮೆಟ್ಟಿ ನಿಲ್ಲುವ ಕೆಲಸವಾಗಬೇಕು ಎಂದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ,
ಪೊಲೀಸ್ ಇಲಾಖೆಯಲ್ಲಿ ಶಿಸ್ತಿನಿಂದ ಕೆಲಸ ಮಾಡಲು ಎಲ್ಲಾ ರೀತಿಯ ವಾತಾವರಣವನ್ನು ಸೃಷ್ಠಿ ಮಾಡಿಕೊಡಲಾಗುವುದು. ಆದುದರಿಂದ ಆಧುನಿಕ ಸಲವರಣೆ ಮತ್ತು ವಿಚಾರಗಳನ್ನು ಬಳಸಿಕೊಂಡು 3-4 ಗಂಟೆಯಲ್ಲಿ ಅಪರಾಧಿಗಳನ್ನು ಪೊಲೀಸರು ಬಂಧಿಸುತ್ತಿದ್ದಾರೆ ಎಂದು ಹೇಳಿದರು.
ನಾನು ಪೊಲೀಸರಿಗೆ ಶಾಂತಿ ಕಾಪಾಡುವ ಜವಾಬ್ದಾರಿಯನ್ನು ನೀಡಿದ್ದೇವೆ. ಪೊಲೀಸರು ಶಾಂತಿಯನ್ನು ಕಾಪಾಡದಿದ್ದಲ್ಲಿ ನಾನು ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದ ಗೃಹ ಸಚಿವರು, ಎಲ್ಲಾ ಪೊಲೀಸರು ನ್ಯಾಯಾಯುತವಾಗಿ ಕೆಲಸ ಮಾಡುವಂತೆ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಸಕ ಡಾ.ಭರತ್ ಶೆಟ್ಟಿ ಅವರು, ಇಲ್ಲಿ ಅತಿ ಹೆಚ್ಚು ವಿದ್ಯಾಸಂಸ್ಥೆಗಳು ಹಾಗೂ ಕೇರಳದ ಗಡಿ ಭಾಗವಾಗಿರುವುದರಿಂದ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕುವ ಕೆಲಸ ಆಗಬೇಕು ಎಂದು ಹೇಳಿದರು.






ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ ಗೋಯಲ್,ಸಂಚಾರಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್, ಪೊಲೀಸ್ ಇಲಾಖೆಯ ಮುಖ್ಯ ಅಭಿಯಂತರ ಮಂಜುನಾಥ್ ಬಿ.ಎಚ್. ಉಪಸ್ಥಿತರಿದ್ದರು.ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಸಿಎಆರ್ ಘಟಕದ ಉಪ ಪೊಲೀಸ್ ಆಯುಕ್ತ ಉಮೇಶ್.ಪಿ, ಕೆ.ಎಸ್.ಹೆಚ್ ಮತ್ತು ಐಡಿಸಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಎಸ್.ಸಣ್ಣೆಗೌಡ, ಸಿಎಆರ್ ಘಟಕದ ಸಹಾಯಕ ಪೊಲೀಸ್ ಆಯುಕ್ತ ಎಂ.ಎ ಉಪಾಸೆ, ಬಜಪೆ ಠಾಣಾ ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯಕ್, ಮಂಗಳೂರು ನಗರ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಜಾನ್ಸ್ ನ್ ಡಿ. ಸೋಜ, ಮಂಗಳೂರು ನಗರ ಎಸಿಪಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು