ಇತ್ತೀಚಿನ ಸುದ್ದಿ
ಕೇರಳದಲ್ಲಿ ಕೋವಿಡ್ ಹೆಚ್ಚಳ: ತಲಪಾಡಿ ಗಡಿಯಲ್ಲಿ ಕಟ್ಟೆಚ್ಚರ; ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಪರಿಶೀಲನೆ
30/07/2021, 20:28
ಮಂಗಳೂರು(reporterkarnataka.com): ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗವಾದ ತಲಪಾಡಿ ಚೆಕ್ ಪೋಸ್ಟ್ ಸೇರಿದಂತೆ ಕೇರಳದೊಂದಿಗೆ ಹಂಚಿಕೊಂಡಿರುವ ಎಲ್ಲ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್ ಗುರುಪ್ರಸಾದ್, ಟಿಎಚ್ಒ ಡಾ. ಸುಜಯ್ ಭಂಡಾರಿ, ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.