1:12 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೇರಳ ಸ್ಫೋಟ ಪ್ರಕರಣ: ಘಟನೆಯ ಹೊಣೆ ಹೊತ್ತ ವ್ಯಕ್ತಿ ಪೊಲೀಸರಿಗೆ ಶರಣು; ವೀಡಿಯೊ ಹಂಚಿಕೊಂಡ ಆರೋಪಿ

30/10/2023, 15:57

ಕೊಚ್ಚಿ(reporterkarnataka.com): ಒಂದು ಸಾವು ಹಾಗೂ 45ಕ್ಕೂ ಅಧಿಕ ಮಂದಿ ಗಾಯಗೊಳ್ಳಲು ಕಾರಣವಾದ ಕೇರಳದ ಕೊಚ್ಚಿ ಸಮೀಪದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ.
48ರ ಹರೆಯದ ಡೊಮಿನಿಕ್ ಮಾರ್ಟಿನ್ ಪೊಲೀಸರಿಗೆ ಶರಣಾದ ವ್ಯಕ್ತಿ. ಈತ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ ಅದೇ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದಾನೆ.
ಮಾರ್ಟಿನ್ ವೀಡಿಯೊ ಮಾಡಿಕೊಂಡು ಅದನ್ನು
ಹಂಚಿಕೊಂಡಿದ್ದಾನೆ. ವೀಡಿಯೊದಲ್ಲಿ ಆತನು
ಹಲೋ, ನನ್ನ ಹೆಸರು ಮಾರ್ಟಿನ್. ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಫೋಟ ಘಟನೆಗೆ ಬಗ್ಗೆ ನಿಮಗೆ ಸುದ್ದಿ ಸಿಕ್ಕಿರಬಹುದು. ಆ ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾನೆ.
ವೀಡಿಯೊದಲ್ಲಿ ಮಾತನಾಡಿದ ಅವನು, ಯಹೋವನ ಸಾಕ್ಷಿಗಳ ಗುಂಪಿನಲ್ಲಿ ನಾನು ಕಳೆದ 16 ವರ್ಷಗಳಿಂದ ಇದ್ದೇನೆ. ಆದರೆ ಕಳೆದ 6 ವರ್ಷಗಳ ಹಿಂದೆ ಈ ಪಂಗಡವು ತಪ್ಪಾದ ಪಂಗಡವೆಂದು ನನಗೆ ಅರಿವಾಯಿತು. ನೀವು ಬೋಧಿಸುತ್ತಿರುವ ವಿಚಾರಗಳು ತಪ್ಪು ಎಂದು ಸಂಬಂಧಪಟ್ಟವರಲ್ಲಿ ತಿಳಿಸಿದೆ. ಆದರೆ ಅವರು ಅದಕ್ಕೆ ಮನ್ನಣೆ ನೀಡಲಿಲ್ಲ. ಇವರು ಈ ದೇಶದಲ್ಲಿದ್ದುಕೊಂಡು ಈ ದೇಶದ ಜನರೊಂದಿಗೆ ಬೆರೆಯಬಾರದು, ಅವರೊಂದಿಗೆ ವ್ಯವಹರಿಸಬಾರದು ಎಂದು ಬೋಧಿಸುತ್ತಾರೆ ಎಂದು ಮಾರ್ಟಿನ್ ಆರೋಪಿಸಿದ್ದಾನೆ.
ಘಟನೆಯ ಸಂಪೂರ್ಣ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತಿದ್ದೇನೆ. ಪೊಲೀಸರಿಗೆ ಶರಣಾಗುತ್ತೇನೆ ಎಂದು ಹೇಳಿದ್ದಾನೆ.
ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು