ಇತ್ತೀಚಿನ ಸುದ್ದಿ
ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್: ಕಾಲಿಗೆ ಗಾಯ; ಆಸ್ಪತ್ರೆಗೆ ದಾಖಲು
30/10/2023, 17:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.ಪೂರ್ಣೇಶ್ ಎಂಬ ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ಕಾಡು, ಕಾಫಿತೋಟ, ದೊಡ್ಡ-ದೊಡ್ಡ ಮರಗಳ ಮೇಲೆ ಮಲಗುತ್ತಿದ್ದ.
ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆದಿದ. ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಪೂರ್ಣೇಶ್ ಶರಣಾಗಲಿಲ್ಲ. ನಂತರ ಪಿ.ಎಸ್.ಐ.ದಿಲೀಪ್ ಕುಮಾರ್ ಅವರು ಪೂರ್ಣೇಶ್ ಕಾಲಿಗೆ ಫೈರಿಂಗ್ ಮಾಡಿದರು.
ರೌಡಿಯಿಂದ ಹಲ್ಲೆಗೊಳಗಾದ ಪೊಲೀಸ್ ಕಾನ್ ಸ್ಟೇಬಲ್ ಮಂಜುನಾಥ್ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿ ಪೂರ್ಣೇಶ್ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.