1:44 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಇದುವರೆಗೆ ಒಟ್ಟು 11.68,381 ಮಂದಿಗೆ ಕೋವಿಡ್ ಲಸಿಕೆ ವಿತರಣೆ

31/07/2021, 07:20

ಮಂಗಳೂರು(reporterkarnataka.com): ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. 

ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು  ಒಟ್ಟು 2,69,735 ಮಂದಿಗೆ ನೀಡಲಾಗಿದೆ.

ಲಸಿಕೆ ಪಡೆದವರಲ್ಲಿ 18 ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ 32.46% ಹಾಗೂ ಎರಡನೇ ಡೋಸ್ 5.01% ನೀಡಲಾಗಿದೆ.

45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ 65.53% ಹಾಗೂ ಎರಡನೇ ಡೋಸ್ 38.65% ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ 92.83% ಹಾಗೂ ಎರಡನೇ ಡೋಸ್ 55.54%, ನೀಡಲಾಗಿದೆ.

ಜು.30ರ ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 6125 ಮಂದಿ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು