ಇತ್ತೀಚಿನ ಸುದ್ದಿ
ತೊಕ್ಕೊಟ್ಟು ಸೇತುವೆಯಿಂದ ಹಾರಿ ಚಿಕ್ಕಮಗಳೂರಿನ ಮತ್ತೊಬ್ಬ ಉದ್ಯಮಿ ಆತ್ಮಹತ್ಯೆ: ಸೇತುವೆಯಲ್ಲಿ ಕಾರು ನಿಲ್ಲಿಸಿ ಸಾವಿಗೆ ಶರಣು
30/10/2023, 20:11

ಮಂಗಳೂರು(reporterkarnataka.com):ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಡಿದ್ದ ನೇತ್ರಾವತಿ ಸೇತುವೆ ಇದೀಗ ಮತ್ತೆ ಸುದ್ದಿ ಮಾಡಿದೆ. ಚಿಕ್ಕಮಗಳೂರಿನ ಮತ್ತೊಬ್ಬ ಉದ್ಯಮಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡ ಯುವ ಉದ್ಯಮಿ ಎಂದು ಗುರುತಿಸಲಾಗಿದೆ.ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಫಿಡೇ ಮಾಲೀಕ ಸಿದ್ದಾರ್ಥ ಅವರು 4 ವರ್ಷಗಳ ಹಿಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ನಂತರ ಈ ಜಾಗದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿ ಜಾಸ್ತಿಯಾಯಿತು. ಈ ಹಿನ್ನೆಲೆಯಲ್ಲಿ ಸೇತುವೆಯ ಎರಡೂ ಬದಿಯಲ್ಲಿ ನೆಟ್ ಅಳವಡಿಸಿದ ತಂತಿ ಬೇಲಿ ಹಾಕಲಾಯಿತು. ಇದೀಗ ತಂತಿ ಬೇಲಿ ಬದಿಯಿಂದಲೇ ಪ್ರಸನ್ನ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾನೆ.ಕಾಫಿಡೇ ಮಾಲೀಕ ಸಿದ್ದಾರ್ಥ ಅವರ ಆತ್ಮಹತ್ಯೆ ಬೆನ್ನಲ್ಲಿಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವ ಪ್ರಕರಣಗಳು ಹೆಚ್ಚಾಗಿದ್ದವು. ಈ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯ ಪಕ್ಕದಲ್ಲಿರುವ ಸೇತುವೆಯ ಆಚೆ-ಈಚೆ ಬೇಲಿಯನ್ನು ನಿರ್ಮಾಣ ಮಾಡಲಾಗಿತ್ತು. ತಂತಿ ಬೇಲಿ ಹಾಗೂ ತಡೆಗೋಡೆ ನಿರ್ಮಾಣ ಮಾಡಿದರೂ ಅದನ್ನು ಮುರಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.