ಇತ್ತೀಚಿನ ಸುದ್ದಿ
ಅಸಾಧಾರಣ ಪ್ರತಿಭೆಯ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ: 5ರಿಂದ 18ರೊಳಗಿನವರು ನೀವಾಗಿದ್ದರೆ ಅರ್ಜಿ ಸಲ್ಲಿಸಬಹುದು
31/07/2021, 07:24
ಮಂಗಳೂರು(reporterkarnataka.com): 2021-22ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ಅಸಾಧಾರಣ ಪ್ರತಿಭೆ ಹೊಂದಿರುವ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.
ನಾವಿನ್ಯತೆ, ತಾರ್ಕಿಕ ಸಾಧನೆ, ಕಲೆ, ಸಾಂಸ್ಕ್ರತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ನೀಡಲಾಗುವುದು. 5 ರಿಂದ 18 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು 2021ರ ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 08242451254 ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.