3:30 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್

31/07/2021, 07:33

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನತಾ ನ್ಯಾಯಾಲದಲ್ಲಿ ಪ್ರಕರಣಗಳು ಶೀಘ್ರವಾಗಿ ವಿಲೇವಾರಿಯಾಗುತ್ತಿದ್ದು ನ್ಯಾಯಾಲಯದಲ್ಲಿ ನೀಡುವ ತೀರ್ಪು ಅಂತಿಮವಾಗಿದ್ದು , ಯಾವುದೇ ನ್ಯಾಯಾಲಯದಲ್ಲಿ ತೀರ್ಪನ್ನು ಪ್ರಶ್ನಿಸುವ ಅವಕಾಶವಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಆರ್.ನಾಗರಾಜ್ ಹೇಳಿದರು. 

ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಮ್ಮಿಕೊಂಡಿದ್ದ ಜನತಾ ನ್ಯಾಯಾಲಯದ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಆಗಸ್ಟ್ 14 ರಂದು ಮೆಗಾ ಲೋಕ ಅದಾಲತ್‌ನ್ನು ಹಮ್ಮಿಕೊಂಡಿದ್ದು , ಆಗಸ್ಟ್ 13 ರವರೆಗೂ ಪ್ರತಿದಿನ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. 

ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ಸಂಧಾನಕಾರರಾಗಿರುತ್ತಾರೆ . ಕಕ್ಷಿದಾರರ ನಡುವೆ ಮಾತುಕತೆ ನಡೆಸಿ ಅವರ ಮನವೊಲಿಸಿ ಯಾವುದೇ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಸಂದರ್ಭವನ್ನು ಸೃಷ್ಟಿ ಮಾಡಲಾಗುತ್ತಿದೆ . 350 ಕ್ಕೂ ಹೆಚ್ಚಿನ ಪ್ರಕರಣಗಳನ್ನು ಪೂರ್ವಭಾವಿ ಸಮ ಸಂಧಾನದಲ್ಲಿ ತೀರ್ಮಾನ ಮಾಡಿ ಯಶಸ್ವಿ ಕಾಣಲಾಗಿದೆ. ಜಿಲ್ಲೆಯ ಕಕ್ಷಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನತೆ ಹಕ್ಕನ್ನು ಸಾದರಪಡಿಸಿಕೊಳ್ಳಲು ವಿವಾದಗಳು ವೇಗವಾಗಿ ತೀರ್ಮಾನಗೊಂಡು ಅವರ ಹಕ್ಕನ್ನು ಬೇಗ ಪಡೆದುಕೊಂಡರೆ ಸರ್ವರಿಗೂ ಸಮಬಾಳು ಎಂಬ ಪ್ರಜಾಪ್ರಭುತ್ವದ ಬುನಾದಿಯ ಉದ್ದೇಶವನ್ನು ಈಡೇರಿಸಿದಂತೆ ಆಗುತ್ತದೆ ಎಂದು ಅವರು ಹೇಳಿದರು . ಜನತಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ಅವರು ಮಾತನಾಡಿ ಇದುವರೆಗೆ ಸುಮಾರು 8 ಸಾವಿರ ಪ್ರಕರಣಗಳನ್ನು ಗುರುತಿಸಿದ್ದು , 1700 ಪ್ರಕರಣಗಳು ಪೂರ್ವಭಾವಿ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದೆ . ಮುಖ್ಯವಾಗಿ ಚೆಕ್ ಅಮಾನ್ಯ ಪ್ರಕರಣಗಳು , ಕ್ರಿಮಿನಲ್ ಪ್ರಕರಣಗಳು , ವಿಭಾಗ ಪ್ರಕರಣಗಳು , ಮರಳು ಕಳ್ಳತನ ಪ್ರಕರಣಗಳು , ಸಿವಿಲ್ ಪ್ರಕರಣಗಳು ಹಾಗೂ ಮೋಟಾರ್ ಬೈಕ್ ಪ್ರಕರಣಗಳು ಇತ್ಯರ್ಥ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. 


ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್ ಅವರು ಮಾತನಾಡಿ, ಪ್ರತಿಯೊಬ್ಬ ಕಕ್ಷಿದಾರರ ನಡುವಿನ ದ್ವೇಷವನ್ನು ಹೋಗಲಾಡಿಸಿ ಸಾಮರಸ್ಯದಿಂದ ಜೀವನ ನಡೆಸಲು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. 

ಪ್ರಧಾನ ಸಂಧಾನಕಾರರಾಗಿ ಜೋಕ್ಟೋ, ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಪವನೇಶ್ , ಜಿಲ್ಲಾ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ , ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಅನಿತಾ , ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ರಘುಪತಿ ಗೌಡ ಹಾಗೂ ವಕೀಲರು ಸೇರಿ ಪೂರ್ವ ಜನತಾ ನ್ಯಾಯಾಲಯದ ಸಂಧಾನವನ್ನು ನಡೆಸುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್.ನಾಗರಾಜ್ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು