12:51 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು

01/11/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ.
ಎನ್.ಆರ್.ಪುರ ತಾಲೂಕಿನ
ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶೋಕ್ ಕಾಂಬೋಡಿಯಾದಲ್ಲಿ ಬಂಧನಕ್ಕೀಡಾದ ಯುವಕ ಎಂದು ಗುರುತಿಸಲಾಗಿದೆ.
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ವಿದೇಶದಲ್ಲಿ ಕೆಲಸದ ಆಸೆಗೆ ತೆರಳಿದ್ದ ಯುವಕನನ್ನು
ಮಾಲೀಕ ಬಂಧನದಲ್ಲಿಟ್ಟಿದ್ದಾನೆ. ನಾನು ಇಲ್ಲಿ ಕೆಲಸ ಮಾಡಲ್ಲ, ಭಾರತಕ್ಕೆ ವಾಪಸ್ ಹೋಗುತ್ತೇನೆ ಎಂದಾಗ ಮಾಲೀಕ ಯುವಕನಿಗೆ ಈ ವಿಚಿತ್ರ ಶಿಕ್ಷೆ ನೀಡಿದ್ದಾನೆ. ಯುವಕನನ್ನು ಕತ್ತಲು ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಕೆಲಸ ಬಿಟ್ಟು ವಾಪಾಸ್ ಊರಿಗೆ ತೆರಳಬೇಕಾದರೆ 13 ಲಕ್ಷ ಹಣ ಬೇಡಿಕೆ ಇಟ್ಟಿದ್ದಾನೆ.
ಸುರೇಶ್ ಮತ್ತು‌ ಪ್ರೇಮಾ ದಂಪತಿಯ ಮೊದಲ ಪುತ್ರನಾದ ಅಶೋಕ್ ಇದೀಗ ವಿದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾನೆ. ಮಗನ್ನು ನೆನೆದು ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಯುವಕನ ಪೋಷಕರು ಸೇರಿದಂತೆ ಕುಟುಂಬಸ್ಥರು, ಗ್ರಾಮಸ್ಥರು ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು