12:03 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ 2 ದಿನಗಳ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ: ಕಾದಂಬರಿಗಾರ್ತಿ ಹೇಮಾ ನಾಯ್ಕ್ ಅಧ್ಯಕ್ಷೆ

02/11/2023, 16:41

ಮಂಗಳೂರು(reporterkarnataka.com): ನಗರದ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನವೆಂಬರ್ 4 ಮತ್ತು 5ರಂದು ನಡೆಯಲಿರುವ 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹೇಮಾ ನಾಯ್ಕ್ ಅವರು ಆಯ್ಕೆಗೊಂಡಿದ್ದಾರೆ.
ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಮೈಕಲ್ ಡಿಸೋಜ ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಖ್ಯಾತ ಹಿಂದಿ ಕವಿ, ವಿಮರ್ಶಕ ವಿದ್ವಾಂಸ ಉದಯನ್ ವಾಜಪೇಯಿ ಅವರು 4ರಂದು ಪೂರ್ವಾಹ್ನ 10ಕ್ಕೆ ಸಮ್ಮೇಳನ ಉದ್ಘಾಟಿಸಿ ‘ಸಾಹಿತ್ಯ ಮತ್ತು ಬದುಕು’ ಈ ಕುರಿತು ಶಿಖರೋಪನ್ಯಾಸ ನೀಡಲಿದ್ದಾರೆ.
ಸಮ್ಮೇಳನದ ಸರ್ವಾಧ್ಯಕ್ಷೆ ಖ್ಯಾತ ಕಾದಂಬರಿಕಾರ್ತಿ ಮತ್ತು ಕೊಂಕಣಿ ಚಳುವಳಿಯ ಮುಂದಾಳು ಹೇಮಾ ನಾಯ್ಕ್ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ. ಭಾನುವಾರ ದಿನಾಂಕ 5ರ ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಖ್ಯಾತ ಕನ್ನಡ ಸಾಹಿತಿ, ಪ್ರಾಧ್ಯಾಪಕಿ ಮಮತಾ ಜಿ. ಸಾಗರ ‘ಸಾಹಿತ್ಯ ಮತ್ತು ಸಾಮಾಜಿಕ ಜವಾಬ್ದಾರಿ’ ಈ ಕುರಿತು ಉಪನ್ಯಾಸ ನೀಡಲಿದ್ದಾರೆ.
ಪ್ರಮುಖ ಉಪನ್ಯಾಸಗಳು ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಇದ್ದು, ಕೊಂಕಣಿಯೇತರ ಸಾಹಿತ್ಯಾಸಕ್ತರೂ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. 4ರಂದು ಸಂಜೆ 5.30ಕ್ಕೆ ಖ್ಯಾತ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಳೆಯವರ ಅಧ್ಯಕ್ಷತೆಯಲ್ಲಿ ಸಮಕಾಲೀನ ಬರಹಗಾರಿಗೆ ಸವಾಲುಗಳು ಈ ವಿಷಯದ ಮೇಲೆ ಇಂಗ್ಲಿಷ್ ಭಾಷೆಯಲ್ಲಿ ಪರಿಸಂವಾದ ನಡೆಯಲಿದ್ದು, ಉದಯನ್ ವಾಜಪೇಯಿ ಮತ್ತು ಮಮತಾ ಜಿ. ಸಾಗರ ವಿಚಾರ ಮಂಡನೆ ಮಾಡಲಿದ್ದಾರೆ.
ಕರ್ನಾಟಕದ ಬೇರೆ ಬೇರೆ ಪ್ರದೇಶಗಳಿಂದ ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ ದೆಹಲಿಯಿಂದಲೂ ಸುಮಾರು 600 ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಕೊಂಕಣಿ ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆ ಮತ್ತು ಸೊಗಡನ್ನು ಸವಿಯಲು 25ನೇ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನ ಕರಾವಳಿಯ ಸಾಹಿತ್ಯಾಸಕ್ತರಿಗೆ ಅವಕಾಶ ಕಲ್ಪಿಸಿದೆ. ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದ್ದು, ಪ್ರತಿನಿಧಿಗಳಾಗಿ ನೋಂದಣಿ ಮಾಡಿಕೊಳ್ಳುವವರಿಗೆ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ.
ಹೇಮಾ ನಾಯ್ಕ್ ಪರಿಚಯ: ವಿದ್ಯಾರ್ಥಿ ಜೀವನದಲ್ಲೇ ಬರವಣಿಗೆ ಮತ್ತು ಕೊಂಕಣಿ ಚಳುವಳಿಗೆ ಧುಮುಕಿದ ಹೇಮಾ ನಾಯ್ಕ್ ಕೊಂಕಣಿ, ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಾಹಿತ್ಯ ರಚಿಸಿದ್ದಾರೆ. ಮುಂಬಯಿ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ಕತೆ, ಕಾದಂಬರಿ, ರೇಡಿಯೊ ನಾಟಕಗಳನ್ನು ರಚಿಸಿರುವ ಅವರು ಸಂಪಾದಕಿ ಮತ್ತು ಪ್ರಕಾಶಕಿಯಾಗಿಯೂ ಸೇವೆ ನೀಡಿದ್ದಾರೆ. ಈ ವರೆಗೆ ೮ ಸ್ವತಂತ್ರ ಪುಸ್ತಕಗಳನ್ನು ಪ್ರಕಟಿಸಿರುವ ಹೇಮಾ ನಾಯ್ಕ್, 10ಕ್ಕೂ ಜಾಸ್ತಿ ಕೃತಿಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ. ಮಹಿಳಾ ಪರ ಸಂಘಟನೆ ಮತ್ತು ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಹೇಮಾ ನಾಯ್ಕ್, ದೂರದರ್ಶನ ವಾಹಿನಿಗಾಗಿ ಕೊಂಕಣಿ ಸಿನೆಮಾ ನಿರ್ಮಾಣ ಮಾಡಿದ್ದಾರೆ. ಅವರ ಸಾಹಿತ್ಯ ಸೇವೆಗಾಗಿ ಹೊಸ ದೆಹಲಿಯ ಸಾಹಿತ್ಯ ಅಕಾಡೆಮಿ, ಗೋವಾ ಸರಕಾರದ ಕಲಾ ಅಕಾಡೆಮಿ, ಭಾಷಾ ಮಂಡಳ್ ಗೋವಾ, ಕಥಾ, ಮಣಿಪಾಲದ ಡಾ| ಟಿ. ಎಂ. ಪೈ. ಪೌಂಡೇಶನ್ ಹೀಗೆ ಹತ್ತಾರು ಪ್ರಶಸ್ತಿ – ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಹೇಮಾ ನಾಯ್ಕ್ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ನಂದಗೋಪಾಲ ಶೆಣೈ, (ಉಪಾಧ್ಯಕ್ಷರು, ಸಮ್ಮೇಳನ ಸ್ವಾಗತ ಸಮಿತಿ), ಮೆಲ್ವಿನ್ ರೊಡ್ರಿಗಸ್ (ಉಪಾಧ್ಯಕ್ಷರು, ಅಖಿಲ ಭಾರತೀಯ ಕೊಂಕಣಿ ಪರಿಷದ್), ಚೇತನ್ ಆಚಾರ್ಯ(ಕಾರ್ಯಾಧ್ಯಕ್ಷರು, ಅಖಿಲ ಭಾರತೀಯ ಕೊಂಕಣಿ ಪರಿಷದ್ ), ಟೈಟಸ್ ನೊರೊನ್ಹಾ (ಕಾರ್ಯದರ್ಶಿ, ಸಮ್ಮೇಳನ ಸ್ವಾಗತ ಸಮಿತಿ), ಎಚ್. ಎಮ್. ಪೆರ್ನಾಲ್, (ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷರು) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು