12:51 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ: ಸುನಿಲ್ ಕುಮಾರ್ ಬಜಾಲ್ ಆರೋಪ

02/11/2023, 23:08

ಮಂಗಳೂರು(reporterkarnataka.com): ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ, ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು ಹೊರಟಿದೆ ಎಂದು ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಹಾಗೂ ವಿದ್ಯುತ್, ರೈಲ್ವೇ ಖಾಸಗೀಕರಣ ಮಾಡಲು ಹೊರಟ ಕೇಂದ್ರ ಸರಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಖಂಡಿಸಿ ನವೆಂಬರ್ ತಿಂಗಳಲ್ಲಿ ದೇಶಾದ್ಯಂತ ನಡೆಯುವ ಪ್ರಚಾರಾಂದೋಲನದ ಭಾಗವಾಗಿ ಉಳ್ಳಾಲ ತಾಲೂಕು ಮಟ್ಟದ ವಾಹನ ಪ್ರಚಾರ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಾಥಾವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ರಷ್ಣಪ್ಪ ಸಾಲ್ಯಾನ್ ಅವರು ಮಾತನಾಡಿ, ದೇಶದ ಸಾರ್ವಜನಿಕ ಉದ್ದಿಮೆಗಳನ್ನು ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ಅಡಿಯಲ್ಲಿ ದೈತ್ಯ ಕಾರ್ಪೊರೇಟ್ ಕಂಪೆನಿಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶರವೇಗದಲ್ಲಿದೆ. ವಿಮಾನ ನಿಲ್ದಾಣ, ಹೆದ್ದಾರಿಗಳು, ಬಂದರುಗಳು, ರೈಲ್ವೇ, ವಿದ್ಯುತ್, ಶಿಕ್ಷಣ, ಬ್ಯಾಂಕುಗಳು ಹಾಗೂ ರಕ್ಷಣಾ ವಲಯಗಳನ್ನು ಖಾಸಗೀಕರಣದ ಕಬಂಧಬಾಹುಗಳಲ್ಲಿ ಬಂಧಿಸಲಾಗಿದೆ ಎಂದು ಹೇಳಿದರು.
ಜಾಥಾ ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಯು.ಜಯಂತ ನಾಯಕ್, ಪದ್ಮಾವತಿ ಶೆಟ್ಟಿ, ರೋಹಿದಾಸ್, ಇಬ್ರಾಹಿಂ ಮದಕ, ಸುಂದರ ಕುಂಪಲ, ಮಹಮ್ಮದ್ ಅನ್ಸಾರ್ , ನಾರಾಯಣ ತಲಪಾಡಿ, ಜಯಂತ ಅಂಬ್ಲಮೊಗರು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು