10:27 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

03/11/2023, 22:39

ಮಂಗಳೂರು(reporterkarnataka.com): ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಏಕತಾ ದಿನ’ವನ್ನು ಆಚರಿಸಲಾಯಿತು.


18 ಕರ್ನಾಟಕ ಬೆಟಾಲಿಯನ್ ಎನ್‌.ಸಿ.ಸಿ ಇದರ ಆಡಳಿತಾಧಿಕಾರಿ ಲೆ. ಕರ್ನಲ್ ಗ್ರೇಷಿಯನ್ ಸಿಕ್ವೇರಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು,ಭಾರತವು ಅಖಂಡವಾಗಿ ತಲೆಯೆತ್ತಿ ನಿಲ್ಲಲು ಕಾರಣರಾದವರು ಸರ್ದಾರ್ ವಲ್ಲಭಾಯಿ ಪಟೇಲರು. ನಮ್ಮ ದೇಹದ ಪ್ರತಿಯೊಂದು ಅಂಗಗಳು ಸರಿಯಾಗಿ ಕೆಲಸ ಮಾಡುವಂತೆ ಜಾತಿ ಮತ ಧರ್ಮ ಕಾಗಿ ಹೋರಾಡದೆ ದೇಶದ ಒಳಿತಿಗಾಗಿ ಒಂದಾಗಿ ಹೋರಾಡಬೇಕು ಎಂದರು. ಧರ್ಮವು ಪ್ರತಿಯೊಬ್ಬರೂ ಒಳ್ಳೆಯ ಮನುಷ್ಯನಾಗಲು ಹೇಳಿಕೊಡುತ್ತದೆ. ನನಗೆ ಇಂದು ಸಿಗುತ್ತಿರುವ ಗೌರವ ನನ್ನ ಸಮವಸ್ತ್ರದಿಂದ. ಇದು ಭಾರತ ದೇಶ ಕೊಟ್ಟಿರುವ ಸಮವಸ್ತ್ರ. ಈ ರಾಷ್ಟ್ರದ ಏಕತೆ, ಸೌಹಾರ್ದತೆ, ಸುರಕ್ಷೆ ನಮ್ಮ ಕೈಯಲ್ಲಿದೆ ಎಂದು ಅವರು ನುಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದು ಉಕ್ಕಿನ ಮನುಷ್ಯ ಪಟೇಲರ ಕೊಡುಗೆಯನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಏಕತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕಿ ಅನಸೂಯ ಭಾಗವತ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಇನ್ನೋರ್ವ ಸಂಯೋಜಕಿ ಪ್ರತಿಮಾ ಬಾಳಿಗ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ನಾಯಕ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು