7:59 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಭ್ರಷ್ಟಾಚಾರ ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕ: ಲೋಕಾಯುಕ್ತ ಎಸ್ಪಿ ಸೈಮನ್

04/11/2023, 11:36

ಮಂಗಳೂರು(reporterkarnataka.com): ಭ್ರಷ್ಟಾಚಾರ ಜಾಗೃತಿ ವಾರಾಚರಣೆ ಇದರ ಅಂಗವಾಗಿ ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ‘ಭ್ರಷ್ಟಾಚಾರಕ್ಕೆ ವಿರೋಧ, ರಾಷ್ಟ್ರಕ್ಕೆ ಸಮರ್ಪಣೆ ‘ ಎಂಬ ವಿಚಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಮಂಗಳೂರು ಲೋಕಾಯುಕ್ತ ವಿಭಾಗದ ಲೋಕಾಯುಕ್ತ ಎಸ್. ಪಿ, ಸಿ. ಎ. ಸೈಮನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದು ಮಾತನಾಡಿದರು. ಲಂಚವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳುವುದು ಅಥವಾ ಬೇರೆ ಯಾವುದಾದರೂ ರೀತಿಯಲ್ಲಿ ಲಾಭ ಪಡೆದುಕೊಳ್ಳುವುದು ಕೂಡ ಭ್ರಷ್ಟಾಚಾರವೇ ಆಗಿದೆ. ಅದನ್ನು ಆಳವಾಗಿ ಬೇರೂರಲು ಬಿಟ್ಟರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಭ್ರಷ್ಟಾಚಾರವು ಪ್ರತಿಭಾವಂತ ವಿದ್ಯಾರ್ಥಿಗಳ ವಿಕಸನಕ್ಕೆ ಮಾರಕವಾಗಿದೆ. ಲೋಕಾಯುಕ್ತ ಆಕ್ಟ್ ಮತ್ತು ಆರ್‌.ಟಿ.ಐ ಆಕ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಸರಕಾರದ ಬಲವನ್ನು ಗಟ್ಟಿಗೊಳಿಸುವ ಅಸ್ತ್ರವಾಗಿದೆ. ನಮ್ಮ ಮೌನ ನಮ್ಮ ಹಕ್ಕುಗಳನ್ನು ದಮನಿಸುತ್ತದೆ. ದೇಶ ಕಟ್ಟಲು ನಮ್ಮ ಕೊಡುಗೆ ಬಹಳ ಅಗತ್ಯ ಎಂದು ಅವರು ನುಡಿದರು.
ಕಾಲೇಜು ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಡಾ.ದೀಪ್ತಿ ನಾಯಕ್ ಉಪಸ್ಥಿತರಿದ್ದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು ನಾಗರಿಕರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರತಿಮಾ ವಿ. ಬಾಳಿಗ ಸ್ವಾಗತಿಸಿದರು. ಅನುಸೂಯ ವಂದಿಸಿದರು. ಮಧುಶ್ರೀ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು