ಇತ್ತೀಚಿನ ಸುದ್ದಿ
ದತ್ತ ಮಾಲಾ ಅಭಿಯಾನ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್; 2 ಸಾವಿರ ಪೊಲೀಸರ ನಿಯೋಜನೆ; ಡ್ರೋಣ್ ಕ್ಯಾಮೆರಾ ಕಣ್ಗಾವಲು
05/11/2023, 19:27
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇನಾಂ ದತ್ತಾತ್ರೇಯ ಸ್ವಾಮಿ ದರ್ಗಾಸೇರಿದಂತೆ ಜಿಲ್ಲೆಯಾದ್ಯಂತ 2000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿದಂತೆ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಕ ಮಾಡಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ, ಡ್ರೋಣ್ ಕ್ಯಾಮೆರಾ ಕಣ್ಗಾವಲು ಇರಿಸಲಾಗಿದೆ.
ಪೊಲೀಸರಿಂದ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಎಸ್ಪಿ ಡಾ. ವಿಕ್ರಮ್ ಅಮಟೆ ನೇತೃತ್ವದಲ್ಲಿ ರೂಟ್ ಮಾರ್ಚ್ ಮಾಡಲಾಗಿದೆ.
ಎಂ.ಜಿ. ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು.
ಶ್ರೀ ರಾಮಸೇನೆಯಿಂದ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ವಿವಾದಿತ ಸ್ಥಳದಲ್ಲಿರುವ ಗೋರಿಗಳ ಸ್ಥಳಾಂತರಕ್ಕೆ ಶ್ರೀರಾಮಸೇನೆ
ಪಟ್ಟು ಹಿಡಿದಿದೆ. ನಾಳೆ ದತ್ತ ಪಾದುಕೆ ದರ್ಶನ, ಹೋಮ ಪೂಜೆ ನಡೆಯಲಿದೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಪೂಜಾ ಕಾರ್ಯ ನಡೆಯಲಿದೆ.
ನಾಳೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ದತ್ತಮಾಲಾ ಅಭಿಯಾನದಲ್ಲಿ 5000ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ರಾಜ್ಯಾದ್ಯಂತ ದತ್ತಮಾಲಾ ಧರಿಸಿ ದತ್ತ ಪಾದುಕೆ ದರ್ಶನ ಶ್ರೀ ರಾಮ ಸೇನೆ ಕಾರ್ಯಕರ್ತರು ಪಡೆಯಲಿದ್ದಾರೆ.