3:36 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆ ಜಾರಿ ಬಳಿಕದ ಆರ್ಥಿಕ ಸ್ಥಿತಿ ಬಗ್ಗೆ ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಲಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ

05/11/2023, 20:02

ಕಾವೂರು(reporterkarnataka.com): ರಾಜ್ಯದ ಹಣಕಾಸಿನ ವಿಚಾರವಾಗಿ ಸಾರ್ವಜನಿಕರಲ್ಲಿ ಗೊಂದಲ ಅನುಮಾನ, ಗೊಂದಲ ಮೂಡುವಂತಾಗಿದ್ದು,
ಸರಕಾರ ಗ್ಯಾರಂಟಿ ಯೋಜನೆಗಳ ಬಳಿಕ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದಕ್ಕೆ ರಾಜ್ಯ ಸರಕಾರ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರಿಗೆ ವೇತನ ಪಾವತಿ ವಿಳಂಬವಾಗುತ್ತಿದೆ.ಸರಕಾರಿ ಶಾಲೆಗಳಲ್ಲಿ ಬಿಸಿ ಊಟ ಸೇರಿದಂತೆ ಪೂರಕ ಸೌಲಭ್ಯಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ದು ಶಿಕ್ಷಕರೇ ಕೈಯಿಂದ ಭರಿಸಿ ಕೆಲಸ ಮಾಡಬೇಕಾದ ಅನಿವಾರ್ಯ ಸ್ಥಿತಿ ಉಂಟಾಗಿದೆ. ಕೆಟ್ಟು ಹೋದ ಸರಕಾರಿ ಬಸ್ಸುಗಳನ್ನು ದುರಸ್ತಿ ಮಾಡಲು ಕೂಡ ಹಿಂದುಮುಂದೆ ನೋಡುವಂತಾಗಿದೆ ಎಂದಿದ್ದಾರೆ.
ಗೃಹಲಕ್ಷ್ಮಿ ಭಾಗ್ಯದ 2000 ಹಣವನ್ನ ಖಾತೆಗೆ ಹಾಕಲು ತಾಂತ್ರಿಕ ತೊಂದರೆಯ ಕುಂಟು ನೆಪ ಹೇಳಲಾಗುತ್ತಿದೆ. ಶಾಸಕರುಗಳು ತಮ್ಮ ಕ್ಷೇತ್ರದಲ್ಲಿ ಹೊಸ ಯೋಜನೆ ಘೋಷಣೆ ಮಾಡಲೂ ಹಿಂದೇಟು ಹಾಕುವಂತಾಗಿದೆ. ಅನುದಾನವೂ ಸಿಗದಂತಾಗಿದೆ.
ಈ ಎಲ್ಲಾ ವಿಚಾರಗಳಲ್ಲಿ ಸಾಕಷ್ಟು ಗೊಂದಲ ಉಂಟು ಮಾಡುತ್ತಿದ್ದು ಸರಕಾರ ಶ್ವೇತ ಪತ್ರದ ಮೂಲಕ ಆರ್ಥಿಕ ಸ್ಥಿತಿ ಗತಿಯ ಕುರಿತು ಸಾರ್ವಜನಿಕರಿಗೆ ವಿಶ್ವಾಸವನ್ನು ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಿಗಡಾಯಿಸಿದ್ದು, ಸರಕಾರದ ಅನುದಾನ ಪಡೆದು ಮನೆ ಕಟ್ಟಿಕೊಳ್ಳುವ ಬಡ ವರ್ಗಕ್ಕೆ ಮರಳು ಸಿಗದೆ ಮನೆ ಕಟ್ಟಲು ಆಗುತ್ತಿಲ್ಲ. ಸರಕಾರ ಮರಳು ಪೂರೈಕೆಗೆ ಬೇಕಾದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು