1:16 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸಂಜಿತ್ ಎಸ್. ಅಂಚನ್‌ಗೆ ಸುರತ್ಕಲ್ ಎನ್‌ಐಟಿಕೆ ಪಿಎಚ್ ಡಿ ಪದವಿ

05/11/2023, 20:48

ಮಂಗಳೂರು(reporterkarnataka.com): ಮೈಸೂರಿನ ಎನ್‌ಐಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜಿತ್ ಎಸ್. ಅಂಚನ್‌ ಅವರು ನವದೆಹಲಿಯ ಗೇಟ್ ಎಂಎಚ್‌ಆರ್‌ಡಿ ಸಂಸ್ಥೆಯ ಫೆಲೋಶಿಪ್‌ನೊಂದಿಗೆ ಸುರತ್ಕಲ್ ಎನ್‌ಐಟಿಕೆಯ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಚಿಂತಾ ಶಂಕರರಾವ್ ಮಾರ್ಗದರ್ಶನದಲ್ಲಿ ಮಂಡಿಸಿದ ” Robust Multivariable Controller Design for an Activated Sludge Process” ಮಹಾಪ್ರಬಂಧಕ್ಕೆ ಸುರತ್ಕಲ್ ಎನ್‌ಐಟಿಕೆ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಇವರು ಮಂಗಳೂರು ವಿವಿಯ ನಿವೃತ್ತ ಅಧೀಕ್ಷಕ, ಕೊಣಾಜೆಯ ಶ್ರೀಧರ್ ಕೆ. ಮತ್ತು ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಜಯಂತಿ ಪದ್ಮಾವತಿ ಎಸ್. ದಂಪತಿ ಪುತ್ರ. 2016 ರಲ್ಲಿ ಇವರು ಎಂಐಟಿ ಮಣಿಪಾಲದ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದ ಮೂಲಕ ಯುಪಿಬಿ ವಿಶ್ವವಿದ್ಯಾಲಯ ಕೊಲಂಬಿಯಾದಲ್ಲಿ ಇಂಟರ್ನಿ ಆಗಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ, ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್‌ಗಾಗಿ ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಸುರತ್ಕಲ್ ಎನ್‌ಐಟಿಕೆಯಲ್ಲಿ ಶನಿವಾರ ನಡೆದ 21ನೇ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿದರು. ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಸಲಹೆಗಾರ, ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅಧ್ಯಕ್ಷ ಡಾ.ಸತೀಶ್ ರೆಡ್ಡಿ. ಸಿಎಸ್‌ಐಆರ್- ಎನ್‌ಐಐಎಸ್‌ಟಿ ನಿರ್ದೇಶಕ ಡಾ.ಸಿ.ಆನಂದ ರಾಮಕೃಷ್ಣನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು