4:07 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ

ಇತ್ತೀಚಿನ ಸುದ್ದಿ

ಹಸುವಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಗ್ಯಾಸ್ ಲಾರಿ: ಛಿದ್ರ ಛಿದ್ರಗೊಂಡ ಸವಾರನ ಮೃತದೇಹ

05/11/2023, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಉರುಳಿದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದ ಪರಿಣಾಮ ದೇಹ ಛಿದ್ರಛಿದ್ರಗೊಂಡು ಸವಾರ ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ನಡೆದಿದೆ.
ಲಾರಿ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಬೈಕ್ ಸವಾರರನ್ನು
ವಿಶ್ವೇಂದ್ರ (43) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಈ ಘೋರ ದುರಂತ ನಡೆದಿದೆ. ಬೈಕಿನ ಹಿಂದೆ ಕೂತಿದ್ದ ಲಕ್ಷ್ಮಿ ಎಂಬ ಮಹಿಳೆಯ ಕಾಲು ಕಟ್ ಆಗಿದೆ. ಲಕ್ಷ್ಮೀ ಅವರನ್ನು
ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿದ್ದವರು ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎನ್ನಲಾಗಿದೆ.ಸಾಗಿಸಲಾಗದಷ್ಟು ವಿಶ್ವೇಂದ್ರ ಮೃತದೇಹ ಛಿದ್ರಗೊಂಡಿತ್ತು.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು