2:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹೈ ಮಾಸ್ಕ್ ದೀಪ ಖರೀದಿಯಲ್ಲಿ ತಾಪಂ ಇಒ ಭಾರಿ ಅವ್ಯವಹಾರ: 3 ಪಟ್ಟು ಜಾಸ್ತಿ ತೆತ್ತು ಖರೀದಿ ಆರೋಪ

01/08/2021, 08:20

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹೈ ಮಾಸ್ಕ್ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದು ಸಂಬಂಧಪಟ್ಟ ದಾಖಲೆ ನೀಡಲು ಮೀನಮೇಷ ಮಾಡುತ್ತಿದ್ದಾರೆ. ಕೂಡಲೇ ತನಿಖೆ ಮಾಡಬೇಕೆಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ

ಎನ್. ಜೆ  ರಾಜೇಶ್ ಆರೋಪಿಸಿದ್ದಾರೆ.

ನಾಗಮಂಗಲದ ಕಾರ್ಯನಿರತ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ನಾಗಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು  ಹೈ ಮಾಸ್ಕ್ ಖರೀದಿಯಲ್ಲಿ ಮೂರು ಪಟ್ಟು ಬೆಲೆ ನಮೂದಿಸಿ ಖರೀದಿ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಮಾಹಿತಿ ಕೇಳಿದರೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಅನುಮಾನಾಸ್ಪದವಾಗಿದೆ ಎಂದು ಹೇಳಿದರು.

2020 -21 ನೇ ಸಾಲಿನ ಹೆಚ್ಚುವರಿ ಸಂಯುಕ್ತ ಅನುದಾನ 32.25 ಲಕ್ಷದ ಯೋಜನೆಯಲ್ಲಿ ಖರೀದಿ ಇತರೆ ಯೋಜನೆಗಳಲ್ಲಿಯೂ ಮಾಡಿರುವ ಹೈ ಮಾಸ್ಕ್ ದೀಪಗಳು ಅವ್ಯವಹಾರವಾಗಿದೆ ಹಾಗೂ ದೀಪ ಖರೀದಿ ಮಾಡಿ ಸಂಬಂಧಪಟ್ಟ ಪಂಚಾಯಿತಿಗಳಿಗೆ ಹಸ್ತಾಂತರ  ಮಾಡಬೇಕಾಗಿದ್ದು ಆದರೆ ಯಾವುದೇ ದಾಖಲೆಗಳು ನೀಡಿಲ್ಲವೆಂದು ತಿಳಿದು ಬಂದಿದೆ ಕೂಡಲೇ ಯೋಜನೆಯ ಬಗ್ಗೆ ಪೂರ್ಣ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತುಪ್ಪದ ಮಡ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು