7:45 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

06/11/2023, 15:48

ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ.
ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದಾರೆ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕರಾಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು