4:22 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಜಲ ಕಂಟಕ: ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಸಿಂಧನೂರು ಸೇರಿದಂತೆ ಮತ್ತೆ 7 ತಾಲೂಕುಗಳ ಸೇರ್ಪಡೆ

06/11/2023, 19:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳನ್ನು ಸೇರ್ಪಡೆ ಮಾಡಿ ಕಂದಾಯ‌ ಇಲಾಖೆ ಆದೇಶ ಹೊರಡಿಸಿದೆ.
ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ,ಹುಮ್ನಾಬಾದ್, ಕಮಲನಗರ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು, ವಿಜಯಪುರ ಜಿಲ್ಲೆಯ ತಿಕೋಟಾ ಬರಪೀಡಿತ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡ ತಾಲೂಕುಗಳು.
ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿರುವ ಮಾನದಂಡಗಳ ಪ್ರಕಾರ ಮತ್ತು ಜಿಲ್ಲಾಧಿಕಾರಿಗಳಿಂದ ಬೆಳಹಾನಿ ಸಮೀಕ್ಷೆ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೊಸದಾಗಿ 07 ತಾಲ್ಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು ಬರಗಾಲ ಛಾಯೆ ಮೂಡಿದೆ. ಹೀಗಾಗಿ ಸರ್ಕಾರವು ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೇ ಘೋಷಣೆ ಮಾಡಿತ್ತು.
ಬರ ಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಸರ್ಕಾರ ರಾಜ್ಯದ ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು