2:40 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಿಗೆ ಇನಾಯತ್ ಅಲಿ, ಮಿಥುನ್ ರೈ ಮನವಿ: ಪರಿಹಾರದ ಭರವಸೆ

06/11/2023, 20:23

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಕಾಂಗ್ರೆಸ್ ನಾಯಕರಾದ ಇನಾಯತ್ ಆಲಿ ಹಾಗೂ ಮಿಥುನ್ ರೈ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಲಭ್ಯವಿರುವ ಮರಳಿಗೆ ದುಬಾರಿ ಬೆಲೆ ನೀಡಬೇಕಾಗಿದೆ. ಇದರಿಂದ ಜಿಲ್ಲೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಮರಳು ಖರೀದಿ ಅಸಾಧ್ಯವಾಗಿದೆ. ಈ ಕಾರಣದಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳು ಹಲವೆಡೆ ಸ್ಥಗಿತಗೊಂಡಿದೆ.
ಗೃಹ ಸಚಿವ ಡಾ. ಜಿ.‌ ಪರಮೇಶ್ವರ್ ಅವರು ಮಂಗಳೂರಿಗೆ ಆಗಮಿಸಿದ ಸಂದರ್ಭ ಈ ವಿಚಾರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಮಿಥುನ್ ರೈ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದರು. ಮರಳುಗಾರಿಕೆಗೆ ಅನುಮತಿಯ ವಿಚಾರದ ಬಗ್ಗೆ ಗೃಹ ಸಚಿವರ ಗಮನಕ್ಕೆ ತಂದರು.
ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಗೃಹ ಸಚಿವರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್ ಆಯುಕ್ತರಿಗೆ ಸೂಕ್ತ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು