5:15 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ 3 ಮಂದಿ ಬಂಧನ; 95 ಲಕ್ಷ ರೂ. ಮೌಲ್ಯದ ಸೊತ್ತು ವಶ

06/11/2023, 23:37

ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಒಟ್ಟು 95 ಸಾವಿರ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ 3 ಜನ ವ್ಯಕ್ತಿಗಳು ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಮೌಲ್ಯ 95 ಸಾವಿರ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಡಿಕೇರಿ ಪ್ರಮೋದ್ ಎಮ್.ಜಿ.(30), ಮೊಹಮ್ಮದ್ ರಾಶೀದ್ (41) ಹಾಗೂ ದರ್ಶನ್ ಎಸ್.(24) ಎಂದು ಗುರುತಿಸಲಾಗಿದೆ.
ಆರೋಪಿತರಲ್ಲಿ ಪ್ರಮೋದ್ ಎಮ್. ಜಿ. ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಡಿಕೇರಿ ಜಿಲ್ಲೆಯ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ರಾಶೀದ್ ಎಂ.ಝಡ್ ಎಂಬಾತನ ಮೇಲೆ ಮಡಿಕೇರಿ ಜಿಲ್ಲೆಯ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕಣಗಳು ದಾಖಲಾಗಿರುತ್ತವೆ. ದರ್ಶನ್ ಎಸ್. ಎಂಬಾತನ ಮೇಲೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು