1:54 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ಕಾಳಜಿ ಕೇಂದ್ರಕ್ಕೆ ತಹಶೀಲ್ದಾರ್ ಭೇಟಿ: ಸಂತ್ರಸ್ತರಿಗೆ ಆಳಲು ಆಲಿಕೆ; ಶೀಘ್ರ ಪರಿಹಾರದ ಭರವಸೆ

01/08/2021, 19:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಹಲ್ಯಾಳ ಗ್ರಾಮದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಭಾನುವಾರ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್ ಭೇಟಿ ಮಾಡಿ ಜನರಿಗೆ ಶೀಘ್ರವೇ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಶೇಗುಣಸಿ ಮಾತನಾಡಿ, ಈಗಾಗಲೇ ನಮ್ಮ ಗ್ರಾಮ ಭಾಗಶಃ ಮುಳುಗಡೆಯಾಗಿದ್ದು ದಯವಿಟ್ಟು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಹಾಗೂ ಮುಖ್ಯಮಂತ್ರಿಗಳು ಇತ್ತಕಡೆ ಗಮನ ಹರಿಸಿ ನಮ್ಮ ಗ್ರಾಮವನ್ನು  ಸಂಪೂರ್ಣ ಮುಳುಗಡೆ ಗ್ರಾಮ ಘೋಷಿಸಿ ಶೀಘ್ರವೇ ಪರಿಹಾರ ಘೋಷಿಸಬೇಕು ಎಂದರು.

ನಂತರ ಮಾತನಾಡಿದ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಈಗಾಗಲೇ ಕಾಳಜಿ ಕೇಂದ್ರದಲ್ಲಿ ದನಗಳಿಗೆ ಮೇವು ಹಾಗೂ ಆಹಾರದ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ. ಆದಷ್ಟು ಬೇಗ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಮಣಿ, ವಿಠ್ಠಲ್ ಕಾಂಬಳೆ, ಶಶಿಕಾಂತ್ ದಳವಾಯಿ, ವಿಠ್ಠಲ್ ಮಂಗಸೂಳಿ, ನೋಡಲ್ ಅಧಿಕಾರಿ ನಟರಾಜ್ ಮದರಗಾಂವ, ಗ್ರಾಮ ಲೆಕ್ಕಾಧಿಕಾರಿ   ಶಿವಾನಂದ ಜಾಯಗೋಣಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು