ಇತ್ತೀಚಿನ ಸುದ್ದಿ
ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಬೆಳೆಸಿಕೊಳ್ಳುವುದು ಅಗತ್ಯ: ಡಾ. ನಾಗರತ್ನ ಕೆ.ಎ.
09/11/2023, 15:51
ಮೂಡುಬಿದ್ರೆ(reporterkarnataka.com): ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023-24ನೇ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು ಜರುಗಿತು.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ.ಉದ್ಘಾಟಿಸಿದರು.
ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಬೆಳೆಸಿಕೊಳ್ಳುವುದರಲ್ಲಿ ಸಹಕಾರಿ. ಜೀವನ ಮೌಲ್ಯಗಳನ್ನು ತಿಳಿಸುತ್ತಾ ಯುವ ಜನತೆಯಲ್ಲಿ ಸಹೋದರತೆಯನ್ನು ಮೂಡಿಸುವಲ್ಲಿ ಬಹಳ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಎಂದರು.
ಕಾಲೇಜಿನ ಸಂಯೋಜಕರಾದ ಡಾ. ದಯಾನಂದ್ ನಾಯ್ಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಪರಿಪೂರ್ಣತೆ ಪಡೆಯಲು ರಾಷ್ಟ್ರೀಯ ಸೇವಾ ಯೋಜನೆ ಒಂದು ಉತ್ತಮ ಮಾರ್ಗ ಎಂದರು.
ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ರವಿರಾಜ್ ಬಿ.ಜಿ. , ಗಾಯತ್ರಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಸೇವಾಯೋಜನೆ ಘಟಕ ನಾಯಕರಾದ ಸುಶ್ಮಿತಾ, ಹೇಮಂತ್, ಕೃತಿಕಾ, ಪರಶುರಾಮ ಉಪಸ್ಥಿತರಿದ್ದರು.