7:46 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ

10/11/2023, 10:07

ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ
ಜಯಾನಂದ ಪೆರಾಜೆ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಡಾ. ಮನೋಹರ್ ರೈ ಶುಭ ಹಾರೈಸಿದರು.

ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಸಂಚಾಲಕ ಇಬ್ರಾಹಿಂ ಕೆ.ಮಾಣಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯರಾದ ಎಸ್. ಚೆನ್ನಪ್ಪ ಗೌಡ, ಹಿರಿಯ ಶಿಕ್ಷಕಿ ಜಯಲಕ್ಷ್ಮಿ, ಶ್ಯಾಮಲ ಕೆ.,ಸುಶ್ಮಿತಾ ಉಪಸ್ಥಿತರಿದ್ದರು. ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿದರು. ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿ, ಜಯರಾಮ ಕಾಂಚನ ನಿರೂಪಿಸಿದರು.ಯೋಜನೆಯ ಸೇವಾ ಪ್ರತಿನಿಧಿ ಲೈಲಾಬಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು