5:45 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಮೇಲುಗೈ: ವಿಜಯೇಂದ್ರ ರಾಜ್ಯ ಕಮಲ ಪಾಳಯದ ನೂತನ ಸಾರಥಿ

10/11/2023, 20:15

ಹೊಸದಿಲ್ಲಿ(reporterkarnataka.com): ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕೊನೆಗೂ ಸುಖಾಂತ್ಯ ಕಂಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು
ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯೇಂದ್ರ ಅವರ ನೇಮಕದ ಆದೇಶ ಹೊರಡಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಈ ಆಯ್ಕೆ ನಡೆಸಿದೆ.
ಬಿ.ವೈ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಪಕ್ಷದ ಕಾರ್ಯದಿಂದ ಯಡಿಯೂರಪ್ಪ ಅವರನ್ನು ಹೊರಗಿಟ್ಟ ಕಾರಣ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಮತ್ತೆ ಪ್ರವರ್ಧಮಾನಕ್ಕೆ ತರುವ ನಿಟ್ಟಿನಲ್ಲಿ ಅವರ ಪುತ್ರನ ಆಯ್ಕೆ ಮಾಡಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ. ಪುತ್ರ ರಾಜ್ಯಾಧ್ಯಕ್ಷರಾಗಿರುವುದರಿಂದ ಯಡಿಯೂರಪ್ಪ ಅವರು ಮತ್ತೆ ಸಕ್ರೀಯರಾಗಿ ಪಕ್ಷದ ಗೆಲುವಿಗೆ ಶ್ರಮಿಸುವರು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಮೂಲೆಗೆ ತಳ್ಳುವ ನಿಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಅಷ್ಟೇನು ಪ್ರಾಮುಖ್ಯತೆ ಇಲ್ಲದ ಉಪಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರ ಅವರಿಗೆ ನೀಡಲಾಗಿತ್ತು.
ಇದೀಗ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶದ ಮೇರೆಗೆ ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು