8:17 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಡೆಕ್ಕಲ್ : 25 ವರ್ಷಗಳ ಹಿಂದೆ ಮುಚ್ಚಿದ್ದ ಸರಕಾರಿ ಶಾಲೆ ಮತ್ತೆ ತೆರೆಯಲು ಗ್ರಾಮಸ್ಥರ ಒತ್ತಾಯ

01/08/2021, 19:33

ಮೂಡುಬಿದರೆ(reporterkarnataka.com): ಇಲ್ಲಿನ ಪಡುಮಾರ್ನಾಡು ಗ್ರಾಮದ ಡೆಕ್ಕಲ್ ಎಂಬಲ್ಲಿ ಸುಮಾರು 25 ವರ್ಷಗಳ ಹಿಂದೆ ಮುಚ್ಚಿ ಹೋಗಿ ಇದೀಗ ಪಳಿಯುಳಿಕೆ ಮಾತ್ರ ಉಳಿದಿರುವ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮತ್ತೆ ಪ್ರಾರಂಭಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರ ಸಭೆ ಭಾನುವಾರ ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ಮತ್ತು ಶ್ರೀನಾಥ್ ಸುವರ್ಣ, ಸದಸ್ಯರಾದ ರಾಜೇಶ್ ಸುವರ್ಣ, ವಾಸುದೇವ ರಾವ್ ಸ್ಥಳೀಯರಾದ ಸೂರಜ್  ಜೈನ್ ಮಾರ್ನಾಡು, ಸತೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 ಶಾಲೆಯನ್ನು ಮತ್ತೆ ಪ್ರಾರಂಭಿಸುವ ಬಗ್ಗೆ ಸಮೂಹ ಸಂಪನ್ಮೂಲ ವ್ಯಕ್ತಿ  ಪ್ರಸನ್ನ ಶೆಣೈ ಅವರು ಇಲಾಖೆಯ ಮಾಹಿತಿಗಳನ್ನು ನೀಡಿದರು. ಈ ಸಾಲಿನಲ್ಲಿ ಶಾಲಾ ವಠಾರದಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಿಸುವ ಬಗ್ಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಗಳನ್ನು ಕೇಳಿಕೊಂಡು ಮುಂದಿನ ಸಾಲಿನಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಸ್ಥಳೀಯರಾದ ಪ್ರೌಢಶಾಲೆ ಅಧ್ಯಾಪಕ ಅಣ್ಣಿ ಎಂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು