1:52 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನದೊಳಗೆ 6 ಗ್ಯಾರಂಟಿ ಯೋಜನೆ ಜಾರಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ

10/11/2023, 22:54

ಹೈದರಾಬಾದ್(reporterkarnataka.com): ಕರ್ನಾಟಕದಲ್ಲಿ ನಾವು 5 ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ 6 ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಮಾಡುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಅವರ ಸುಳ್ಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ.ಎಂದು ಸಿದ್ದರಾಮಯ್ಯ ನುಡಿದರು.
ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರಾ? ಎಂದು ಕರ್ನಾಟಕದ ಮುಖ್ಯಮಂತ್ರಿ ಸವಾಲು ಹಾಕಿದರು.

ಬಿಜೆಪಿ ಮತ್ತು ಬಿಆರ್ ಸಿ ಎರಡೂ ಒಂದೇ. ಬಿಆರ್ ಸಿ ತೆಲಂಗಾಣದಲ್ಲಿ ಬಿಜೆಪಿ ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಅವರು ಹೇಳಿದರು.
ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ. ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸವಾಗಿ ಎಂದು ಸಿದ್ದರಾಮಯ್ಯ ಟೀಕಿಸಿದರು.
ಕೆ.ಸಿ.ಆರ್ 10 ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ 10 ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡು ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಅವರು ನುಡಿದರು.
ಬಿಜೆಪಿ ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ 100 ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ.
ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ.
ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು