7:48 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಮಾಜಿ ರಾಜ್ಯಪಾಲ ಉಡುಪಿಯ ಪಿ.ಬಿ. ಆಚಾರ್ಯ ಅಸ್ತಂಗತ: ಮುಂಬೈ ನಿವಾಸದಲ್ಲಿ ಕೊನೆಯುಸಿರೆಳೆದ ಕರಾವಳಿ ಕಣ್ಮಣಿ

11/11/2023, 11:39

ಮಂಗಳೂರು(reporterkarnataka.com): ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಮುಂಬಯಿ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಪಿ.ಬಿ. ಆಚಾರ್ಯ ಅವರು ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರು ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಉಡುಪಿಯಲ್ಲಿ ಬಾಲಕೃಷ್ಣ, ರಾಧಾ ಆಚಾರ್ಯ ದಂಪತಿ ಪುತ್ರನಾಗಿ ಪಿ.ಬಿ. ಆಚಾರ್ಯ ಅವರು 1931ರ ಅ.8ರಂದು ಜನಿಸಿದ್ದರು. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್‌ನಲ್ಲಿ ಮೆಟ್ರಿಕ್ಯುಲೇಷನ್ ಶಿಕ್ಷಣ ಮುಗಿಸಿದ ಅವರು ಎಂಜಿಎಂ ಕಾಲೇಜಿನಲ್ಲಿ ಪದವಿ ಪಡೆದರು.
ಮುಂಬಯಿ ವಿವಿಯಲ್ಲಿ ಎಲ್‌ಎಲ್‌ಬಿ ಪದವಿ ಪಡೆದರು. ಮುಂಬಯಿ ವಿವಿಯ ಸೆನೆಟ್ ಸದಸ್ಯರಾಗಿದ್ದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂಘ ಪರಿವಾರದ ಸಂಘಟನೆಗಳಲ್ಲಿ ಹಲವು ವರ್ಷ ಸಕ್ರಿಯರಾಗಿದ್ದ ಅವರು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಅಧ್ಯಯನ ಮಾಡಿದ್ದರು. ಉಡುಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಅವರು ಅವರು ಮಂಗಳೂರಿನ ಜತೆಯೂ ನಿಕಟ ಬಾಂಧವ್ಯ ಇಟ್ಟುಕೊಂಡಿದ್ದರು. ಮಂಗಳೂರಿನ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಒತ್ತಿಕೊಂಡು ಅವರ ಪತ್ನಿಯ ತವರು ಮನೆ ಇದೆ. ರಾಜ್ಯಪಾಲರಾಗಿದ್ದ ವೇಳೆಯಲ್ಲೂ ಅವರು ಹಲವು ಬಾರಿ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಭೇಟಿ ಕೊಟ್ಟಿದ್ದರು. ಮಾಜಿ ಆದ ಬಳಿಕವೂ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಗೆ ಬಂದಿದ್ದರು. ರಾಜ್ಯಪಾಲರಾಗಿದ್ದಾಗ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಮೈದಾನದಲ್ಲಿ ನಡೆದ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಸರಳ ವ್ಯಕ್ತಿತ್ವ ಆಚಾರ್ಯ ಅವರಿಗೆ ಮಕ್ಕಳು ಅಂದ್ರೆ ಅಚ್ಚುಮೆಚ್ಚು. ಮಕ್ಕಳಿಗೋಸ್ಕರವೇ ಜೇಬಿನಲ್ಲಿ ಚಾಕಲೇಟ್ ಇಟ್ಟುಕೊಳ್ಳುತ್ತಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು