1:38 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ

12/11/2023, 18:38

ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ
ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ.

ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ವೃದ್ಧ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ನೇಜಾರಿನ ಸಮೀಪಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದೆ. ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು ತನಿಖೆ ಮಾಡಿ ಶೀಘ್ರ ಇದರ ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯ ಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು