9:59 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ನೇಜಾರು ಒಂದೇ ಕುಟುಂಬದ 4 ಮಂದಿಯ ಭೀಕರ ಹತ್ಯಾಕಾಂಡ: ಪ್ರತ್ಯಕ್ಷದರ್ಶಿ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ

14/11/2023, 15:06

ಉಡುಪಿ(reporterkarnataka.com): ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯಾಕಾಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಮಹಿಳೆ ಮಂಗಳವಾರ ಬಿಡುಗಡೆಗೊಂಡಿದ್ದಾರೆ.
ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಹಸೀನಾ ಅವರ ಅತ್ತೆಯಾದ ಹಾಜಿರಾ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಹಂತಕ ನಾಲ್ವರನ್ನು ಕೊಂದ ಬಳಿಕ ಹಾಜಿರಾ ಅವರ ಮೇಲೆಯೂ ಚಾಕುವಿನಿಂದ ದಾಳಿ ನಡೆಸಿದ್ದ. ಗಾಯಗೊಂಡ ಹಾಜಿರಾ ಅವರು ತಪ್ಪಿಸಿಕೊಂಡು ಓಡಿ ಹೋಗಿ ಬಾತ್ ರೂಮ್ ನಲ್ಲಿ ಅಡಗಿ ಕುಳಿತಿದ್ದರು. ಈ ಭೀಕರ ಹತ್ಯಾಕಾಂಡದ ಪ್ರತ್ಯಕ್ಷದರ್ಶಿ ಇವರಾಗಿದ್ದಾರೆ.
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹಾಜಿರಾ ಅವರನ್ನು ಇದೀಗ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎರಡು ಕಡೆ ಚಾಕು ಇರಿತಕ್ಕೊಳಗಾದ ಹಾಜಿರಾ ಅವರಿಗೆ ವೈದ್ಯರು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು