5:26 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಒಂದೇ ಮನೆಯ 4 ಮಂದಿಯ ಹತ್ಯೆ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್; ಸೂಕ್ತ ತನಿಖೆಯ ಭರವಸೆ

14/11/2023, 15:14

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಉಡುಪಿ ಜಿಲ್ಲೆ ನೇಜಾರುವಿನಲ್ಲಿ ಭಾನುವಾರ ನಡೆದ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರೊಂದಿಗೆ ದೂರವಾಣಿ ಮೂಲಕ ಮಂಗಳವಾರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಮೃತ ಮಹಿಳೆಯ ಸಹೋದರರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದ ಲಕ್ಷ್ಮೀ ಹೆಬ್ಬಾಳಕರ್, ನಿಮ್ಮೊಂದಿಗೆ ನಾವಿದ್ದೇವೆ. ಸೂಕ್ತ ತನಿಖೆ ನಡೆಸಿ ಅಪರಾಧಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಧೈರ್ಯ ತುಂಬಿದರು.
ಘಟನೆ ನಡೆದ ತಕ್ಚಣ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದ ಸಚಿವರು, ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದರು.
ತನಿಖೆಯ ಕುರಿತು ನಿರಂತರ ಮಾಹಿತಿ ಪಡೆಯುತ್ತಿರುವ ಲಕ್ಷ್ಮೀ ಹೆಬ್ಬಾಳಕರ್, ಆದಷ್ಟು ಬೇಗ ಅಪರಾಧಿಗಳನ್ನು ಪತ್ತೆ ಹಚ್ಚುವಂತೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು